ಬಂಟ್ವಾಳ: ಪೆಟ್ರೋಲ್ ಪಂಪ್ ಉದ್ಯೋಗಿಯಾಗಿದ್ದ ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮದ ಅಬ್ಬೆಟ್ಟು ಎಂಬಲ್ಲಿಯ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿ(56) ತನಗೆ ಈ ಸೋಂಕು ತಗುಲಿದ್ದಲ್ಲಿ ತನ್ನಿಂದಾಗಿ ಮನೆಯವರಿಗೂ ಹರಡಬಹುದೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಗುರುವಾರ ತಡರಾತ್ರಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿರುವ ತನಗೂ ತಗುಲಿರಬಹುದು ಎಂದು ಭಯಗೊಂಡಿದ್ದ ಸದಾಶಿವ ಶೆಟ್ಟಿ ಅವರು ಇನ್ನು ವೈರಸ್ ತನ್ನಿಂದಾಗಿ ಮನೆಯವರಿಗೂ ಹರಡಬಹುದೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel