ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನ ಅರಂಬೋಡಿ ಗ್ರಾಮದ 29 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇವರ ಗಂಟಲು ದ್ರವದ ಪರೀಕ್ಷೆಗೊಳಪಡಿಸಿದಾಗ ಕೊರೊನಾ ದೃಢವಾಗಿದೆ. ಮುಂಬೈಯಿಂದ ಆಗಮಿಸಿದ ಈ ಯುವತಿ ಕ್ವಾರಂಟೈನ್ ನಲ್ಲಿದ್ದರು. ಈ ಮೂಲಕ ದ.ಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಇದೀಗ 62ಕ್ಕೆ ಏರಿದೆ.
ರಾಜ್ಯದಲ್ಲಿ ಇಂದು ಹೊಸದಾಗಿ 105 ಕೊರೊನಾ ವೈರಸ್ ಕೇಸ್‌ಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. 105 ಪ್ರಕರಣಗಳ ಪೈಕಿ 83 ಜನರು ಮಹಾರಾಷ್ಟ್ರ ನಂಟು ಹೊಂದಿದ್ದಾರೆ. ಚಿಕ್ಕಬಳ್ಳಾಪುರ ಒಂದೇ ಕಡೆ 45 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ 9 ಕೇಸ್ ಹಾಗೂ ಹಾಸನಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…