ಇಟಲಿ : ಕೊರೊನಾ ವೈರಸ್ ಗೆ ಇಟಲಿಯಲ್ಲಿ ಇದುವರೆಗೆ 4032 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 630 ಮಂದಿ ಸಾವನ್ನಪ್ಪಿದರೆ ಇಂದೂ ಸಾವಿನ ಸಂಖ್ಯೆ ಮುಂದುವರಿದಿದೆ. ಈಗ ಇಟಲಿ ಕೊರೊನಾ ವೈರಸ್ ಗೆ ನಲುಗಿ ಹೋಗಿದ್ದು , ವೈರಸ್ ಹರಡುವುದು ತಡೆಗೆ ಸರಕಾರ ಕೈಗೊಂಡ ಕ್ರಮಗಳು ವೈಫಲ್ಯವಾಗಿ ಸರಕಾರವೇ ಕೈಚೆಲ್ಲಿದೆ. ಒಂದು ವಾರದಿಂದ ಜನರ ನಿರ್ಲಕ್ಷ್ಯವೇ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.
ಇಟಲಿಯ ಲೊಂಬಾರ್ಡಿ ನಗರದಲ್ಲಿ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ನಂತರ ಈ ನಗರದಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ ಹೆಚ್ಚಿತು. ಇಂದು ಇಟಲಿಯಲ್ಲಿ 47021 ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 4032 ಮಂದಿ ಸಾವನ್ನಪ್ಪಿದ್ದಾರೆ. 5129 ಮಂದಿ ಗುಣಮುಖರಾಗುತ್ತಿದ್ದಾರೆ. 2655 ಮಂದಿ ತುರ್ತುನಿಗಾದಲ್ಲಿದ್ದಾರೆ. ಮಾ.16 ರ ನಂತರ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ.
ಆರಂಭದಲ್ಲಿ ಬಂದ್ ಗೆ ಕರೆ ನೀಡಿದ್ದರೂ ಜನರು ಸುತ್ತಾಡಿಕೊಂಡಿದ್ದಾರೆ. ಹೀಗಾಗಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
( Source :ಸುದ್ದಿ ಸಂಸ್ಥೆಗಳು )
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…