Advertisement
ಸುದ್ದಿಗಳು

ಕೊರೊನಾ ವೈರಸ್ ಸೋಂಕು – ಇಟಲಿಯಲ್ಲಿ 4032 ಮಂದಿ ಸಾವು | ಕೊರೊನಾ ನಿರ್ಲಕ್ಷ್ಯದಿಂದ ಇಟಲಿ ತತ್ತರ | ವೈರಸ್ ಹರಡುವುದು ನಿಯಂತ್ರಿಸಲಾಗದೆ ಕೈಚೆಲ್ಲಿದ ಇಟಲಿ ಆಡಳಿತ

Share

ಇಟಲಿ : ಕೊರೊನಾ ವೈರಸ್ ಗೆ ಇಟಲಿಯಲ್ಲಿ ಇದುವರೆಗೆ 4032 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 630 ಮಂದಿ ಸಾವನ್ನಪ್ಪಿದರೆ ಇಂದೂ ಸಾವಿನ ಸಂಖ್ಯೆ ಮುಂದುವರಿದಿದೆ.  ಈಗ ಇಟಲಿ ಕೊರೊನಾ ವೈರಸ್ ಗೆ ನಲುಗಿ ಹೋಗಿದ್ದು , ವೈರಸ್ ಹರಡುವುದು ತಡೆಗೆ ಸರಕಾರ ಕೈಗೊಂಡ ಕ್ರಮಗಳು ವೈಫಲ್ಯವಾಗಿ ಸರಕಾರವೇ ಕೈಚೆಲ್ಲಿದೆ. ಒಂದು ವಾರದಿಂದ ಜನರ ನಿರ್ಲಕ್ಷ್ಯವೇ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

ಇಟಲಿಯ ಲೊಂಬಾರ್ಡಿ ನಗರದಲ್ಲಿ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ನಂತರ ಈ ನಗರದಲ್ಲಿ ಕೊರೋನಾ ವೈರಸ್​ ಪೀಡಿತರ ಸಂಖ್ಯೆ ಹೆಚ್ಚಿತು. ಇಂದು ಇಟಲಿಯಲ್ಲಿ 47021 ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 4032 ಮಂದಿ ಸಾವನ್ನಪ್ಪಿದ್ದಾರೆ. 5129 ಮಂದಿ ಗುಣಮುಖರಾಗುತ್ತಿದ್ದಾರೆ. 2655 ಮಂದಿ ತುರ್ತುನಿಗಾದಲ್ಲಿದ್ದಾರೆ. ಮಾ.16 ರ ನಂತರ ಸಾವಿನ ಸಂಖ್ಯೆ ಹೆಚ್ಚುತ್ತಿದೆ.  ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ.

ಆರಂಭದಲ್ಲಿ  ಬಂದ್ ಗೆ ಕರೆ ನೀಡಿದ್ದರೂ  ಜನರು  ಸುತ್ತಾಡಿಕೊಂಡಿದ್ದಾರೆ. ಹೀಗಾಗಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

( Source :ಸುದ್ದಿ ಸಂಸ್ಥೆಗಳು )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

7 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

14 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

14 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

14 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago