ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾರ್ಭಟ ನಿಂತಿಲ್ಲ. ಸೋಮವಾರ ಕೂಡಾ ಗಣನೀಯ ಪ್ರಮಾಣದಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಮತ್ತೆ 89 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 5 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 82 ಕ್ಕೆ ಏರಿಕೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 3685 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 57 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2055 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1221ಕ್ಕೆ ಏರಿಕೆಯಾಗಿದೆ. 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 560 ಮಂದಿಯ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ 661 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 28 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು , ಜಿಲ್ಲೆಯಲ್ಲಿ 5185 ಮಂದಿ ನಿಗಾದಲ್ಲಿದ್ದು, ಈ ಪೈಕಿ 865 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…