ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಒಂದೇ ದಿನ ಸೋಂಕಿಗೆ 3 ಜನ ಬಲಿಯಾಗಿದ್ದು 84 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದೇ ವೇಳೆ ಉಡುಪಿಯಲ್ಲಿ ಬುಧವಾರ ಮತ್ತೆ 22 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಕೊರೋನಾ ವೈರಸ್ ಗೆ ಬುಧವಾರ 3 ಮಂದಿ ಮತ್ತೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಒಟ್ಟು 84 ಕೊರೋನಾ ಪಾಸಿಟಿವ್ ಕೇಸುಗಳು ದಾಖಲಾಗಿವೆ.
ಬುಧವಾರ ಭಟ್ಕಳ ನಿವಾಸಿ 76 ವರ್ಷದ ವ್ಯಕ್ತಿ , ಮಂಗಳೂರು ನಿವಾಸಿ 72 ವರ್ಷದ ವ್ಯಕ್ತಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಯುವಕ ಸೋಂಕಿಗೆ ಬಲಿಯಾಗಿದ್ದಾನೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel