ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 147 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ. ಭಾನುವಾರ ದ ಕ ಜಿಲ್ಲೆ ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದ್ದರೆ ಬೆಂಗಳೂರಿನಲ್ಲಿ 1235 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.ರಾಜ್ಯದಲ್ಲಿ ಒಟ್ಟು 1925 ಪಾಸಿಟಿವ್ ಪ್ರಕರಣ ಿಂದು ಕಂಡುಬಂದಿದೆ. ಆದರೆ ಬೆಂಗಳೂರು ಗ್ರಾಮಾಂತರದಲ್ಲಿ ಯಾವುದೇ ಪ್ರಕರಣವಿಲ್ಲ.
ದಕ ಜಿಲ್ಲೆಯಲ್ಲಿ ಭಾನುವಾರ ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 75 ಮಂದಿಯನ್ನು ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 10 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಬೆಂಗಳೂರು, ಮುಂಬೈ, ಬಿಹಾರದಿಂದ ಮರಳಿದ ಒಟ್ಟು 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…