source: ANI
ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ ಸಾಲದ ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.
ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …