ಸುಳ್ಯ: ಕೊರೋನಾ ವೈರಸ್ ಪೀಡಿತರ ಸಂಖ್ಯೆಯು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು ಸುಳ್ಯ ತಾಲೂಕು ಆಡಳಿತವು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯ ತಾಲೂಕಿನಲ್ಲಿ ಈವರೆಗೆ ಒಟ್ಟು 16 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್ಗಾಗಿ ಎರಡು ದಿನಗಳ ಕಾಲ ಸೇವೆ ಸ್ಥಗಿತಗೊಳಿಸಲಾಗಿದ್ದು ಶನಿವಾರದಿಂದ ಆಸ್ಪತ್ರೆಯ ಸೇವೆಯು ಪುನರಾರಂಭಗೊಳ್ಳಲಿದೆ. ರೋಗಲಕ್ಷಣಗಳಿಲ್ಲದೆ ಕೊರೋನ ವರದಿ ಪಾಸಿಟಿವ್ ಬಂದಿರುವ ವ್ಯಕ್ತಿಗಳಿಗೆ ನಿಯಮಗಳ ಪ್ರಕಾರ ಹೋಮ್ ಐಸೋಲೇಷನ್‌ಗೆ ಸೂಚಿಸುತ್ತಿದ್ದು ಮನೆಗಳಲ್ಲಿಯೇ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ಮನೆಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲದಿರುವ ಮತ್ತು ಜನನಿಬಿಡ ಕಾಲೊನಿಗಳಲ್ಲಿರುವ ರೋಗ ಲಕ್ಷಣವಿಲ್ಲದ ಪಾಸಿಟಿವ್ ಬಂದ ವ್ಯಕ್ತಿಗಳಿಗೆ, ಹಿಂದುಳಿದ ವರ್ಗಗಳ ಇಲಾಖೆಗೆ ಸಂಬಂಧಪಟ್ಟ ವಿದ್ಯಾರ್ಥಿನಿಲಯ, ಹಾಗೂ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ ಅಗತ್ಯಬಿದ್ದಲ್ಲಿ ತಾಲೂಕಿನ ಇತರೆ ಕಡೆಗಳಲ್ಲಿರುವ ಹಾಸ್ಟೆಲ್‌ಗಳಲ್ಲಿ ಕೂಡಾ ವ್ಯವಸ್ಥೆ ಸಿದ್ಧಗೊಳಿಸಲು ಸೂಚಿಸಲಾಗಿದೆ , ಜ್ವರ ಮತ್ತಿತರ ರೋಗಲಕ್ಷಣಗಳಿರುವ ವ್ಯಕ್ತಿಗಳ ಚಿಕಿತ್ಸೆಗಾಗಿ ಈಗಾಗಲೇ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆ, ಕವಿ.ಜಿ ಆಯುರ್ವೇದ ಆಸ್ಪತ್ರೆ, ಜ್ಯೋತಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಬೆಡ್‌ಗಳನ್ನು ಮೀಸಲಿರಿಸಲಾಗಿದೆ. ಅಲ್ಲದೆ ತೀವ್ರ ರೋಗಲಕ್ಷಣವಾದ ಉಸಿರಾಟದ ತೊಂದರೆಯಿರುವವರಿಗೆ ಆಕ್ಸಿಜನ್, ವೆಂಟಿಲೇಟರ್ ಸಹಿತ ವ್ಯವಸ್ಥೆಯನ್ನು ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮಾಡಲಾಗಿರುತ್ತದೆ. ಕೊರೋನಾ ಕುರಿತ ಜಾಗೃತಿಗಾಗಿ ಮತ್ತು ಅಗತ್ಯ ಸಂದರ್ಭಗಳಲ್ಲಿ ಆರೋಗ್ಯ ಇಲಾಖೆಗೆ ನೆರವಾಗಲು ಗ್ರಾಮ ಪಂಚಾಯತ್ ಮಟ್ಟಗಳಲ್ಲಿ ಸಮಿತಿಯನ್ನು ರಚಿಸಲಾಗಿದೆ . ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ . ಸುಳ್ಯ ತಾಲೂಕಿನಲ್ಲಿ ಅತೀವ ಮಳೆಯಾಗುತ್ತಿದ್ದು , ಈ ಸಂದರ್ಭದಲ್ಲಿ ಕೊರೋನಾ ಮಾತ್ರವಲ್ಲದೆ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಸ್ವಯಂನಿಯತ್ರಣ ಹೇರಿಕೊಂಡು ಸಾಮಾಜಿಕ ಅಂತರ ಕಾಪಾಡುವುದು, ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಅಗತ್ಯ ಕೆಲಸಗಳಿಗೆ ಮಾತ್ರ ನಗರ ಪ್ರದೇಶಗಳಿಗೆ ಬಂದು ಹೋಗುವಂತೆ ಹಾಗೂ ವರ್ತಕರು ಸ್ವ ಇಚ್ಛೆಯಿಂದ ಅಂಗಡಿ ಮುಂಗಟ್ಟುಗಳನ್ನು ನಿರ್ದಿಷ್ಟ ಸಮಯ ಮಾತ್ರ ತೆರೆದಿಟ್ಟು ಸಹಕರಿಸಬೇಕಾಗಿ ವಿನಂತಿಸಿಕೊಳ್ಳಲಾಗಿದೆ ಎಂದು ಅಂಗಾರ ತಿಳಿಸಿದ್ದಾರೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…