ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.
ಕೊರೋನಾ ಪಾಸಿಟಿವ್ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ ಮನವಿ ಮಾಡಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…