ಕೊರೋನಾ ಭೀತಿ: ರಾಜ್ಯಾದ್ಯಂತ ಹೈಅಲರ್ಟ್

March 3, 2020
12:47 PM

ಬೆಂಗಳೂರು: ಮಾರಣಾಂತಿಕ ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರೇಕ್ಷಣೀಯ  ಸ್ಥಳಗಳು ಸೇರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೊರೋನಾ ಸೋಂಕಿತ ತೆಲಂಗಾಣದ ಟೆಕ್ಕಿ ಬೆಂಗಳೂರಿಗೆ ಬಂದಿದ್ದ ಹಿನ್ನೆಲೆಯಲ್ಲಿ ನಗರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಹೈದಾರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ವೈರಸ್ ಸೋಂಕು ಪೀಡಿತ ಟೆಕ್ಕಿ ಜತೆಗೆ ಪ್ರಯಾಣಿಸಿದವರ ಆರೋಗ್ಯದ ಮೇಲೆ ವೈದ್ಯಕೀಯ ತಂಡ ನಿಗಾ ಇರಿಸಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಪತ್ತೆಯಾದ ಮೊದಲ ಕೊರೊನಾ ವೈರಸ್​ (COVID-19) ಸೋಂಕು ಪ್ರಕರಣ ಇದಾಗಿದ್ದು, ಬೆಂಗಳೂರಿನಿಂದ ಹೈದಾರಾಬಾದಿಗೆ ಪ್ರಯಾಣಿಸಿದ ಟೆಕ್ಕಿಯಲ್ಲಿ ಪತ್ತೆಯಾಗಿತ್ತು. ಆತ ಇತ್ತೀಚೆಗಷ್ಟೇ ದುಬೈನಿಂದ ಬೆಂಗಳೂರಿಗೆ ಬಂದಿದ್ದ. ರಾಜೀವ್  ಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲಾಗಿದ್ದು,  ವಿದೇಶದಿಂದ ಆಗಮಿಸುತ್ತಿರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕಟ್ಟೆಚ್ಚರ ವಹಿಸಲಾಗಿದೆ. ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಸೇರಿ 12 ದೇಶಗಳಿಂದ ಬರುತ್ತಿರುವ ವಿಮಾನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅಲ್ಲದೇ, ಹೈದರಾಬಾದ್ ನಿಂದ ಬೆಂಗಳೂರಿಗೆ ಬರುವ ವಿಮಾನದಲ್ಲಿನ ಪ್ರಯಾಣಿಕರ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ‌. ಮೂರು ತಂಡಗಳಲ್ಲಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror