ಬೆಂಗಳೂರು: ಮಾರಣಾಂತಿಕ ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರೇಕ್ಷಣೀಯ ಸ್ಥಳಗಳು ಸೇರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೊರೋನಾ ಸೋಂಕಿತ ತೆಲಂಗಾಣದ ಟೆಕ್ಕಿ ಬೆಂಗಳೂರಿಗೆ ಬಂದಿದ್ದ ಹಿನ್ನೆಲೆಯಲ್ಲಿ ನಗರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಹೈದಾರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ವೈರಸ್ ಸೋಂಕು ಪೀಡಿತ ಟೆಕ್ಕಿ ಜತೆಗೆ ಪ್ರಯಾಣಿಸಿದವರ ಆರೋಗ್ಯದ ಮೇಲೆ ವೈದ್ಯಕೀಯ ತಂಡ ನಿಗಾ ಇರಿಸಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ತೆಲಂಗಾಣದಲ್ಲಿ ಪತ್ತೆಯಾದ ಮೊದಲ ಕೊರೊನಾ ವೈರಸ್ (COVID-19) ಸೋಂಕು ಪ್ರಕರಣ ಇದಾಗಿದ್ದು, ಬೆಂಗಳೂರಿನಿಂದ ಹೈದಾರಾಬಾದಿಗೆ ಪ್ರಯಾಣಿಸಿದ ಟೆಕ್ಕಿಯಲ್ಲಿ ಪತ್ತೆಯಾಗಿತ್ತು. ಆತ ಇತ್ತೀಚೆಗಷ್ಟೇ ದುಬೈನಿಂದ ಬೆಂಗಳೂರಿಗೆ ಬಂದಿದ್ದ. ರಾಜೀವ್ ಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದೇಶದಿಂದ ಆಗಮಿಸುತ್ತಿರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಸೇರಿ 12 ದೇಶಗಳಿಂದ ಬರುತ್ತಿರುವ ವಿಮಾನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅಲ್ಲದೇ, ಹೈದರಾಬಾದ್ ನಿಂದ ಬೆಂಗಳೂರಿಗೆ ಬರುವ ವಿಮಾನದಲ್ಲಿನ ಪ್ರಯಾಣಿಕರ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಮೂರು ತಂಡಗಳಲ್ಲಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…