ಗುತ್ತಿಗಾರು: ಕೊರೋನಾ ವೈರಸ್ ಇದೀಗ ದ ಕ ಜಿಲ್ಲೆಯ ವಿವಿದೆಡೆ ಹರಡುತ್ತಿದೆ. ಸುಳ್ಯ ತಾಲೂಕಿನ ಅಲ್ಲಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮಗಳಿಗೆ ಮಾದರಿ ವ್ಯವಸ್ಥೆ ಕೈಗೊಳ್ಳಲಾಗಿದೆ.
ಸಹಕಾರಿ ಸಂಘಕ್ಕೆ ವಿವಿಧ ಕೆಲಸಗಳಿಗೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಈ ಸಂದರ್ಭ ಸಿಬಂದಿಗಳೂ ಆತಂಕ ಇದೆ, ಸಾರ್ವಜನಿಕರಿಗೂ ಸುರಕ್ಷತೆ ಅಗತ್ಯವಾಗಿದೆ. ಈ ಕಾರಣದಿಂದ ಸಹಕಾರಿ ಸಂಘದ ಒಳಗೆ ತೆರಳುವ ಮುನ್ನ ದೇಹದ ಉಷ್ಣತೆ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಅಳವಡಿಕೆ ಕಡ್ಡಾಯ ಅಳವಡಿಕೆಗೆ ಸೂಚಿಸಿ ಸಹಕಾರಿ ಸಂಘಕ್ಕೆ ಆಗಮಿಸಿದ ವ್ಯಕ್ತಿಗಳ ಹೆಸರು ಹಾಗೂ ಮೊಬೈಲ್ ದಾಖಲಿಸಿ ಒಳಬಿಡಲಾಗುತ್ತಿದೆ. ಸಹಕಾರಿ ಸಂಘದ ಒಳಗೆ ಸಾಮಾಜಿಕ ಅಂತರಕ್ಕೂ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಈಗ ಇಂತಹ ವ್ಯವಸ್ಥೆ ಅಗತ್ಯವಾಗಿದೆ. ಎಲ್ಲೆಡೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ.
ಸಮುದಾಯದ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಕಾಳಜಿಯಿಂದ ಸಹಕಾರಿ ಸಂಘದಲ್ಲಿ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ . – ವೆಂಕಟ್ ದಂಬೆಕೋಡಿ, ಅಧ್ಯಕ್ಷರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗುತ್ತಿಗಾರು
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…