ಬೆಂಗಳೂರು: ಕೊರೋನಾ ವೈರಸ್ ಭೀತಿ ಶಾಲಾ ಮಕ್ಕಳ ಪರೀಕ್ಷೆಗೂ ಅಡ್ಡಿಯಾಗಿದೆ. ಈ ವೈರಸ್ ಹರಡುವ ಭೀತಿ ಇರುವುದರಿಂದ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪರೀಕ್ಷಾ ದಿನದ ವೇಳಾಪಟ್ಟಿಯಲ್ಲಿ ಮಾರ್ಪಾಡುಗೊಳಿಸಿದೆ. ಹೀಗಾಗಿ ನಿಗದಿತ ಸಮಯಕ್ಕಿಂತ ಮೊದಲೇ ಪರೀಕ್ಷೆ ನಡೆಯಲಿದೆ.
ಈಗಾಗಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ ಕೆಜಿ ಮತ್ತು ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ರಾಜ್ಯಾದ್ಯಂತ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೊರೋನಾ ವೈರಸ್ ನಿಂದ ಉಂಟಾಗಬಹುದಾದ ಅಪಾಯದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಆದಷ್ಟು ಬೇಗನೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ಬೇಸಿಗೆ ರಜೆಯನ್ನು ಘೋಷಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 11ರಿಂದ 16ರವರೆಗೆ ಹಾಗೂ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 23ರೊಳಗೆ ಪೂರ್ಣಗೊಳಿಸಿ ರಜೆ ನೀಡುವಂತೆ ಆದೇಶಿಸಲಾಗಿದೆ.
10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಿ ನಂತರ ರಜೆ ಘೋಷಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…