ನವದೆಹಲಿ: ದೇಶದಲ್ಲಿ ಉಲ್ಬಣಗೊಳ್ಳತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರಗಳಿಗೆ ಆದೇಶ ಮಾಡಿದ್ದಾರೆ.
Advertisement
ಪ್ರಧಾನಿ ಅವರು ಇಂದು ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
Advertisement
ಈ ಮೂಲಕ ರಾಜ್ಯಗಳಲ್ಲಿ ನಡೆಯುತ್ತರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು. ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳ ಪೂರೈಕೆ ಮತ್ತಿತರ ವಿಚಾರಗಳ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಂದ ಪ್ರಧಾನಿ ಮಾಹಿತಿ ಪಡೆದರು.
ವಿಡಿಯೋ ಸಂವಾದದಲ್ಲಿ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement