ಮಡಿಕೇರಿ: ವ್ಯಕ್ತಿಯೊಬ್ಬರನ್ನು ಕಡಿದು ಕೊಲೆ ಮಾಡಿ ಕಾಫಿ ತೋಟದಲ್ಲಿ ಹಾಕಿದ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳವಾರದಂದು ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಜಂಬೂರು ಗ್ರಾಮದ ಕಾಫಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಆತನ ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಯಾವುದೋ ಹರಿತವಾದ ಆಯುಧದಿಂದ ಕಡಿದು ಕೊಲೆ ಮಾಡಿ ಅದನ್ನು ಮರೆಮಾಚುವ ಉದ್ದೇಶದಿಂದ ಮೃತದೇಹವನ್ನು ಕಾಫಿ ತೋಟದೊಳಗೆ ಹಾಕಿದ ಪ್ರಕರಣದ ಆರೋಪಿಗಳಾದ ಕಿಶೋರ್ ಕುಮಾರ್( 27) ರಾಹುಲ್ ಕುಮಾರ್(22) ಇವರುಗಳನ್ನು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ, ಸೋಮವಾರಪೇಟೆ ವೃತ್ತ ನಿರೀಕ್ಷಕರಾದ ನಂಜುಂಡೇಗೌಡ ಮತ್ತು ಸಿಬ್ಬಂದಿಗಳು, ಸೋಮವಾರಪೇಟೆ ಪೊಲೀಸ್ ಠಾಣಾ ಪಿ.ಎಸ್.ಐ., ಶಿವಶಂಕರ್ ಮತ್ತು ಸಿಬ್ಬಂದಿಗಳು ಮತ್ತು ಮಡಿಕೇರಿ ಡಿ.ಸಿ.ಐ.ಬಿ., ವಿಭಾಗದ ಸಿಬ್ಬಂದಿಗಳು ಪತ್ತೆಹಚ್ಚಿದ್ದು ಇವರ ಕಾರ್ಯವೈಖರಿಯನ್ನು ಪೊಲೀಸ್ ವರಿಷ್ಠಾಧಿಕಾರಿಯವರು ಶ್ಲಾಘಿಸಿರುತ್ತಾರೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…