ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಿಕ್ಷಕರ ಕೊರತೆ : ಪ್ರತಿಭಟನೆಗೆ ನಿರ್ಧಾರ

July 22, 2019
4:00 PM

ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.

Advertisement

ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ   ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು  ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗ್ರಾಮಸ್ಥರ ಬೇಡಿಕೆ ಹೀಗಿದೆ:

ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ  ನಿರ್ಮಾಣವಾಗಬೇಕು  ಎಂದು  ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group