ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.
ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಗ್ರಾಮಸ್ಥರ ಬೇಡಿಕೆ ಹೀಗಿದೆ:
ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…