ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಬಿಡಿಎ ವಾರ್ಡ್ ನ ಬಾಳೆಮಕ್ಕಿ ಎಂಬಲ್ಲಿ ಹೋಟೆಲ್ ಮತ್ತಿತರ ಕಡೆಯಿಂದ ಹರಿಯುವ ಕೊಳಚೆ ನೀರು ಜನವಸತಿ ಪ್ರದೇಶದ ಸಮೀಪದಲ್ಲಿಯೇ ಹರಿದು ತೀವ್ರ ಆರೋಗ್ಯ ಸಮಸ್ಯೆ ಉಂಟಾಗುತಿದೆ. ಈ ಕುರಿತು ಕೂಡಲೇ ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರು ನಗರ ಪಂಚಾಯತ್ ಆಡಳಿತಾಧಿಕಾರಿ ಹಾಗು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ದೂರು ನೀಡಲಾಗಿದೆ.
ಒಳಚರಂಡಿಗೆ ಸಂಪರ್ಕ ಇಲ್ಲದೆ ಕೊಳಚೆ ನೀರು ಮನೆಗಳ ಸಮೀಪದಲ್ಲಿ ಹರಿಯುತಿದೆ ಮತ್ತು ಕೊಳಚೆ ನೀರು ಅಲ್ಲಲ್ಲಿ ಶೇಖರಗೊಂಡು ಸೊಳ್ಳೆಗಳು ಬೆಳೆದು ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತಿದೆ. ಇಲ್ಲಿ ಸೊಳ್ಳೆಗಳು ಬೆಳೆದು ಮಕ್ಕಳಿಗೆ ಮತ್ತು ಮನೆ ಮಂದಿಗೆ ಜ್ವರ, ವಾಂತಿ, ಭೇದಿ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುತಿದೆ ಎಂದು ಬಾಳೆಮಕ್ಕಿಯ ಅಬ್ದುಲ್ ಲತೀಫ್ ತಹಶೀಲ್ದಾರ್ ರಿಗೆ ದೂರು ನೀಡಿದ್ದಾರೆ. ಚರಂಡಿಯಲ್ಲಿ ಕೊಳಚೆ ನೀರು ಹಲವು ಸಮಯದಿಂದ ಇದೇ ಭಾಗದಲ್ಲಿ ಹರಿಯುತ್ತಿದ್ದು ಇದನ್ನು ಸರಿಪಡಿಸಬೇಕು ಎಂದು ನಗರ ಪಂಚಾಯತ್ ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಬ್ದುಲ್ ಲತೀಫ್ ಹೇಳುತ್ತಾರೆ. ಅಲ್ಲದೆ ಪ್ರದೇಶದಲ್ಲಿ ದುರ್ನಾತ ಬೀರುತ್ತಿದ್ದು ಮನೆಯಲ್ಲಿ ವಾಸಿಸಲು ಆಗದ ಪರಿಸ್ಥಿತಿ ಉಂಟಾಗಿದೆ ಎಂದು ಎಂದು ಸಾರ್ವಜನಿಕರು ದೂರಿದ್ದಾರೆ.
ಪ್ರತಿಭಟನೆಯ ಎಚ್ಚರಿಕೆ:
ಬಾಳೆಮಕ್ಕಿ ಭಾಗದಲ್ಲಿ ಜನವಸತಿ ಪ್ರದೇಶದಲ್ಲಿ ಕೊಳಚೆ ನೀರು ಹರಿದು ಸುಮಾರು ಆರು ಕುಟುಂಬಗಳಿಗೆ ತೀವ್ರ ಸಮಸ್ಯೆ ಆಗುತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಸಾರ್ವಜನಿಕರನ್ನು ಸೇರಿಸಿ ನಗರ ಪಂಚಾಯತ್ ಎದುರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ ಹೇಳಿದ್ದಾರೆ. ಈ ಕುರಿತು ಹಲವು ಬಾರಿ ನಗರ ಪಂಚಾಯತ್ ಗೆ ದೂರು ನೀಡಿದರೂ ಸರಿಪಡಿಸಿದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?