ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.
ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.
ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…