ಕೌಕ್ರಾಡಿ: ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಶೈಕ್ಷಣಿಕ ಖಾಸಗಿ ಬಸ್ ನಲ್ಲಿ ಪ್ರವಾಸ ತೆರಳುತ್ತಿದ್ದ ವೇಳೆ ಕೊಕ್ಕಡ ಸಮೀಪದ ಕಾಪಿನ ಬಾಗಿಲು ಎಂಬಲ್ಲಿ ತಮಿಳುನಾಡು ಮೂಲದವರಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿ ಬಸ್ಸು ಪಲ್ಟಿಯಾಗಿದೆ. ಬಸ್ ನಲ್ಲಿ ಸುಮಾರು 50 ವಿದ್ಯಾರ್ಥಿಗಳಿದ್ದರು ಎಂದು ಹೇಳಲಾಗಿದೆ. ಘಟನೆಯಲ್ಲಿ 15 ಮಕ್ಕಳು, ಶಿಕ್ಷಕ ಹಾಗೂ ಚಾಲಕ ಗಾಯಗೊಂಡಿದ್ದು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಉಪ್ಪಿನಂಗಡಿ, ನೆಲ್ಯಾಡಿ, ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾರ್ ವಿರುದ್ಧ ದಿಕ್ಕಿನಲ್ಲಿ ಬಂದ ಕಾರಣ ಬಸ್ ಮಗುಚಿ ಬಿದ್ದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…