ಕ್ಯಾಂಪ್ಕೊ ಸಂಸ್ಥಾಪನಾ ದಿನಾಚರಣೆ

July 11, 2020
10:14 PM

ಮಂಗಳೂರು: ದಿವಂಗತ ವಾರಣಾಶಿ ಸುಬ್ರಾಯ ಭಟ್ಟರು ನೇತೃತ್ವದಲ್ಲಿ, ಕೃಷಿಕ ಸಮುದಾಯದ ಉದ್ಧಾರಕ್ಕಾಗಿ 1973 ಜುಲೈ 11ರಂದು ರೂಪುಗೊಂಡ ಕ್ಯಾಂಪ್ಕೊ ಸಂಸ್ಥೆಯು, ಕಳೆದ 47 ವರ್ಷಗಳಲ್ಲಿ ತನ್ನ ಸದಸ್ಯ ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಸ್ಥಿರ ಬೆಲೆಯೊಂದಿಗೆ ಸೂಕ್ತ ಮಾರುಕಟ್ಟೆಯನ್ನೊದಗಿಸುವುದರೊಂದಿಗೆ ಇನ್ನಿತರ ರೀತಿಯಲ್ಲಿ ನಿರಂತರ ಸೇವೆಯನ್ನು ನೀಡುತ್ತಾ ಬಂದಿದೆ. ಇಂದು ಸಂಸ್ಥೆಯು ಹೆಮ್ಮರವಾಗಿ ಬೆಳೆದು, 1850 ಕೋಟಿ ರೂಪಾಯಿಗಳ ಬೃಹತ್ ವಹಿವಾಟನ್ನು ದಾಖಲಿಸಿದೆಯೆಂದರೆ ಇದು ಸುಬ್ರಾಯ ಭಟ್ಟರ ದೂರದರ್ಶಿ ನಿರ್ಧಾರಗಳ ಫಲವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.

ಅವರು  ಶನಿವಾರದಂದು ಮಂಗಳೂರಿನ ಕ್ಯಾಂಪ್ಕೊ ಮುಖ್ಯಕಚೇರಿಯಲ್ಲಿ ಕ್ಯಾಂಪ್ಕೊ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ಸಂಸ್ಥೆಯ ಹಿರಿಯ ನಿರ್ದೇಶಕರು ಮತ್ತು ಮಾಜಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎ.ಎಸ್.ಭಟ್ ಅವರು ಸಂಸ್ಥೆಯ ಹುಟ್ಟು, ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿ, ವಾರಣಾಶಿಯವರು ಹಾಕಿಕೊಟ್ಟ ಭದ್ರ ಬುನಾದಿ, ತೋರಿದ ಹಾದಿಯಲ್ಲಿ ಸಾಗಿದ ಸಂಸ್ಥೆಯ ಸಾಧನೆಗಳು ಅಪಾರ. ಮುಂದಿನ ದಿನಗಳಲ್ಲಿ ಸಂಸ್ಥೆಯು ಸಾಧಿಸುವುದು ಬಹಳಷ್ಟಿದೆ ಎಂದರು.

ಸಂಸ್ಥೆಯ ನಿರ್ದೇಶಕರುಗಳಾದ  ಕಿಶೋರ್ ಕುಮಾರ್ ಕೊಡ್ಗಿ,  ಕೃಷ್ಣ ಪ್ರಸಾದ್ ಮಡ್ತಿಲ ಮಾತನಾಡಿದರು. ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ  ರೇಷ್ಮಾ ಮಲ್ಯ ಉಪಸ್ಥಿತರಿದ್ದರು.

ಪುತ್ತೂರು ಕ್ಯಾಂಪ್ಕೊ ಚಾಕೊಲೇಟ್ ಕಾರ್ಖಾನೆ ಮತ್ತು ದೇಶಾದ್ಯಂತವಿರುವ ಕ್ಯಾಂಪ್ಕೊ ಶಾಖೆಗಳಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror