ಮಂಗಳೂರು: ದಿವಂಗತ ವಾರಣಾಶಿ ಸುಬ್ರಾಯ ಭಟ್ಟರು ನೇತೃತ್ವದಲ್ಲಿ, ಕೃಷಿಕ ಸಮುದಾಯದ ಉದ್ಧಾರಕ್ಕಾಗಿ 1973 ಜುಲೈ 11ರಂದು ರೂಪುಗೊಂಡ ಕ್ಯಾಂಪ್ಕೊ ಸಂಸ್ಥೆಯು, ಕಳೆದ 47 ವರ್ಷಗಳಲ್ಲಿ ತನ್ನ ಸದಸ್ಯ ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಸ್ಥಿರ ಬೆಲೆಯೊಂದಿಗೆ ಸೂಕ್ತ ಮಾರುಕಟ್ಟೆಯನ್ನೊದಗಿಸುವುದರೊಂದಿಗೆ ಇನ್ನಿತರ ರೀತಿಯಲ್ಲಿ ನಿರಂತರ ಸೇವೆಯನ್ನು ನೀಡುತ್ತಾ ಬಂದಿದೆ. ಇಂದು ಸಂಸ್ಥೆಯು ಹೆಮ್ಮರವಾಗಿ ಬೆಳೆದು, 1850 ಕೋಟಿ ರೂಪಾಯಿಗಳ ಬೃಹತ್ ವಹಿವಾಟನ್ನು ದಾಖಲಿಸಿದೆಯೆಂದರೆ ಇದು ಸುಬ್ರಾಯ ಭಟ್ಟರ ದೂರದರ್ಶಿ ನಿರ್ಧಾರಗಳ ಫಲವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.
ಅವರು ಶನಿವಾರದಂದು ಮಂಗಳೂರಿನ ಕ್ಯಾಂಪ್ಕೊ ಮುಖ್ಯಕಚೇರಿಯಲ್ಲಿ ಕ್ಯಾಂಪ್ಕೊ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ಸಂಸ್ಥೆಯ ಹಿರಿಯ ನಿರ್ದೇಶಕರು ಮತ್ತು ಮಾಜಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎ.ಎಸ್.ಭಟ್ ಅವರು ಸಂಸ್ಥೆಯ ಹುಟ್ಟು, ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿ, ವಾರಣಾಶಿಯವರು ಹಾಕಿಕೊಟ್ಟ ಭದ್ರ ಬುನಾದಿ, ತೋರಿದ ಹಾದಿಯಲ್ಲಿ ಸಾಗಿದ ಸಂಸ್ಥೆಯ ಸಾಧನೆಗಳು ಅಪಾರ. ಮುಂದಿನ ದಿನಗಳಲ್ಲಿ ಸಂಸ್ಥೆಯು ಸಾಧಿಸುವುದು ಬಹಳಷ್ಟಿದೆ ಎಂದರು.
ಸಂಸ್ಥೆಯ ನಿರ್ದೇಶಕರುಗಳಾದ ಕಿಶೋರ್ ಕುಮಾರ್ ಕೊಡ್ಗಿ, ಕೃಷ್ಣ ಪ್ರಸಾದ್ ಮಡ್ತಿಲ ಮಾತನಾಡಿದರು. ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ರೇಷ್ಮಾ ಮಲ್ಯ ಉಪಸ್ಥಿತರಿದ್ದರು.
ಪುತ್ತೂರು ಕ್ಯಾಂಪ್ಕೊ ಚಾಕೊಲೇಟ್ ಕಾರ್ಖಾನೆ ಮತ್ತು ದೇಶಾದ್ಯಂತವಿರುವ ಕ್ಯಾಂಪ್ಕೊ ಶಾಖೆಗಳಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…