ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಫ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಫ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ನಿಯಮಿತ ಮಂಗಳೂರಿನ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಇವರು ವಹಿಸಿದ್ದರು. ವೇದಿಕೆಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್ ಖಂಡಿಗ, ಮೆನೆಜಿಂಗ್ ಡೈರೆಕ್ಟರ್ ಎಂ.ಸುರೇಶ್ ಭಂಡಾರಿ, ಕ್ಯಾಂಪ್ಕೋ ನಿರ್ದೇಶಕರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ, ಕೃಷ್ಣ ಪ್ರಸಾದ್ ಮಡ್ತಿಲ, ಚಾಕಲೇಟು ಪ್ಯಾಕ್ಟರಿ ಡೆಪ್ಯುಟಿ ಜನರಲ್ ಮೆನೇಜರ್ ಪ್ರಾನ್ಸಿಸ್ ಡಿಸೋಜ, ಯೂನಿಯನ್ ಅಧ್ಯಕ್ಷರಾದ ರಾಧಾಕೃಷ್ಣ ಭಟ್, ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್, ಸೆಕ್ರೆಟರಿ ಶಾಂತಿ ಹೊಳ್ಳ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ , ಪಿಯುಸಿ ಹಾಗೂ ಡಿಗ್ರಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಾದ ಪ್ರಣೀತ್ ಆರ್.ಪಿ, ಹರೀಶ್ ಭಟ್.ಕೆ, ಶಮಾ, ಅನುಪಮಾ.ಟಿ, ಸಾತ್ವಿಕ್, ಚೈತನ್ಯ ರಾಜೇಶ್ವರಿ.ಬಿ.ಆರ್, ವೈಶಾಕ್.ಕೆ.ಎಮ್, ಅಜಯ್ ಕೃಷ್ಣ.ಎಮ್, ಸಹನಾ ಮತ್ತು ಕ್ರೀಡೆಯಲ್ಲಿ ಹೆಸರುಗಳಿಸಿದ ದಿಗಂತ್.ವಿ.ಎಸ್, ಅನಘ.ಕೆ.ಎಮ್, ಅನುಶ್ರೀ, ಪ್ರಣವ್ ಹೊಳ್ಳ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಧ್ಮನಾಭ, ಗೋಪಾಲ್ ರಾವ್, ಬಿ.ರಾಮ, ಚಂದ್ರಶೇಖರ ಗೌಡ, ಬಾಲಚಂದ್ರ ಶೆಟ್ಟಿ ಇವರುಗಳಿಗೆ ಸನ್ಮಾನಿಸಲಾಯಿತು.
ವಾರ್ಷಿಕ ಕ್ರೀಡಾ ಕೂಟದಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ನೀಡಲಾಯಿತು. ಸಭಾ ಕಾರ್ಯಕ್ರಮದ ನಂತರ ಕ್ಯಾಂಪ್ಕೋ ಉದ್ಯೋಗಸ್ಥರ ಮನೆಯವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…