ಬೆಂಗಳೂರು: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಐಸಿಎಂಆರ್‌ನ ಸದ್ಯದ ವರದಿಯಂತೆ ಕೋವಿಡ್-19 ಸೋಂಕಿತರ ಸಂಖ್ಯೆ 279ಕ್ಕೆ ಏರಿದ್ದು, ನಾಲ್ವರು ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ.
ಇಂದು ಒಂದೇ ದಿನ ಕರ್ನಾಟಕದಲ್ಲಿ 3 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದರಿಂದಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ.
ಶುಕ್ರವಾರ ಒಂದೇ ದಿನ ದೇಶದಲ್ಲಿ 49 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಮಹಾರಾಷ್ಟ್ರದಲ್ಲಿ 63, ಕೇರಳದಲ್ಲಿ 40, ಉತ್ತರ ಪ್ರದೇಶದಲ್ಲಿ 24, ರಾಜಸ್ಥಾನದಲ್ಲಿ 23, ತೆಲಂಗಾಣದಲ್ಲಿ 19, ದೆಹಲಿಯಲ್ಲಿ 17, ಕರ್ನಾಟಕದಲ್ಲಿ 16, ಲಡಾಕ್‌ನಲ್ಲಿ 13 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಗುಜರಾತ್‌ನಲ್ಲಿ 7, ಪಂಜಾಬ್‌ನಲ್ಲಿ 6, ಪಶ್ಚಿಮ ಬಂಗಾಳ, ಚಂಡೀಗಡದಲ್ಲಿ ತಲಾ 5 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ವೈರಸ್‌ನಿಂದ 23 ವ್ಯಕ್ತಿಗಳು ಗುಣಮುಖರಾಗಿದ್ದಾರೆ.
ವಿಶ್ವದಾದ್ಯಂತ 11,419 ಜನ ಕೋವಿಡ್-19ಗೆ ಬಲಿಯಾಗಿದ್ದು, 2 ಲಕ್ಷದ 76 ಸಾವಿರ ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದುವರೆಗೂ 91,954 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾನುವಾರ ಜನತಾ ಕರ್ಫ್ಯೂಗೆ ಮೋದಿ ಕರೆ ನೀಡಿದ್ದಾರೆ. ಇದರಿಂದ ಭಾನುವಾರ ಭಾರತೀಯ ರೈಲ್ವೆ ಕೂಡ ಪ್ಯಾಸೆಂಜರ್ ರೈಲುಗಳನ್ನು ದೇಶಾದ್ಯಂತ ಸ್ಥಗಿತಗೊಳಿಸಿದ್ದು, ಬೆಂಗಳೂರಿನ ನಮ್ಮ ಮೆಟ್ರೋ ಸೇರಿ ದೇಶದ ಹಲವು ಮೆಟ್ರೋಗಳ ಸಂಚಾರವು ಬಂದ್ ಆಗಲಿದೆ. ಇದರ ಜೊತೆಗೆ ನಾಳೆಯಿಂದ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿಷೇಧಿಸಿದ್ದು, ವೀಸಾಗಳನ್ನು ರದ್ದುಗೊಳಿಸಿದೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…