ಮಂಗಳೂರು:- ಕೋವಿಡ್-19 ಹಿನ್ನಲೆಯಲ್ಲಿ 18 ರಿಂದ 65 ವರ್ಷದೊಳಗಿನ ಕ್ಷೌರಿಕ ಮತ್ತು ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರವಾಗಿ ರೂ.5000 ಗಳನ್ನು ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರದ ಸೇವಾಸಿಂಧು ಪೋರ್ಟಲ್ ನಲ್ಲಿ ನಿಗಧಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡನೆಯಾಗಿರುವ ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಛಾಯಾ ಚಿತ್ರವನ್ನು ಅಪಲೋಡ್ ಮಾಡಬೇಕು.
ಕ್ಷೌರಿಕ, ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಉದ್ಯೋಗ ಪ್ರಮಾಣ ಪತ್ರ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರರು, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ. ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಯಾವುದಾದರೊಂದು ಅಧಿಕಾರಿಯಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಬೇಕಾಗಿರುತ್ತದೆ. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್‍ಬೀಡಿ ಎದುರು, ಬಂಟ್ಸ್‍ಹಾಸ್ಟೇಲ್, ಮಂಗಳೂರು-575003 ಕಚೇರಿ ಪ್ರಕಟಣೆ ತಿಳಿಸಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…