ಕ.ಸಾ.ಪ ವತಿಯಿಂದ ಕನ್ನಡದಲ್ಲಿ ಶೇ.100 ಅಂಕ ಗಳಿಸಿದವರಿಗೆ ಸನ್ಮಾನ

June 30, 2019
10:00 AM

ಸುಳ್ಯ: ಕನ್ನಡ ವಿಷಯದಲ್ಲಿ ಶೇಕಡ 100 ಅಂಕ ಪಡೆದ ವಿದ್ಯಾರ್ಥಿಗಳು ತನ್ನ ನಿರ್ದಿಷ್ಟ ಗುರಿಯೊಂದಿಗೆ ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆ ಮಾಡುವ ಜೊತೆಗೆ ಕನ್ನಡವನ್ನು ಬೆಳೆಸುವ ರಾಯಭಾರಿಗಳಾಗಬೇಕು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ. ಆರ್.ಗಂಗಾಧರ ಹೇಳಿದರು‌.

ಸುಳ್ಯ ಕನ್ನಡ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಾಹಿತ್ಯ ಪರಿಷತ್ ವತಿಯಿಂದ 10 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಶೇಕಡಾ 100  ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು‌. ಕಾರ್ಯಕ್ರಮವನ್ನು ಕ.ಸಾ‌.ಪ ನಿಕಟಪೂರ್ವ ಅಧ್ಯಕ್ಷೆ ಎಂ. ಮೀನಾಕ್ಷಿ ಗೌಡ ಉದ್ಘಾಟಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಮಹಮ್ಮದ್ ಮಜೀಫ್ ಮತ್ತು ದ್ವೀತಿಯ ಸ್ಥಾನ ಪಡೆದ ಅನಂತ್ ಹಾಗು ಶೇ.100 ಅಂಕ ಗಳಿಸಿದ 50 ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕ.ಸಾ.ಪ ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಗಿರಿಜಾ ಎಂ.ವಿ ಪ್ರಾರ್ಥಿಸಿ ಮಮತಾ ಎಂ. ಜೆ‌ ಕಾರ್ಯಕ್ರಮ ನಿರೂಪಿಸಿದರು.

 

Advertisement

 

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ
January 11, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror