ಸುಳ್ಯ: ಕನ್ನಡ ವಿಷಯದಲ್ಲಿ ಶೇಕಡ 100 ಅಂಕ ಪಡೆದ ವಿದ್ಯಾರ್ಥಿಗಳು ತನ್ನ ನಿರ್ದಿಷ್ಟ ಗುರಿಯೊಂದಿಗೆ ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆ ಮಾಡುವ ಜೊತೆಗೆ ಕನ್ನಡವನ್ನು ಬೆಳೆಸುವ ರಾಯಭಾರಿಗಳಾಗಬೇಕು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ. ಆರ್.ಗಂಗಾಧರ ಹೇಳಿದರು.
ಸುಳ್ಯ ಕನ್ನಡ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಾಹಿತ್ಯ ಪರಿಷತ್ ವತಿಯಿಂದ 10 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕ.ಸಾ.ಪ ನಿಕಟಪೂರ್ವ ಅಧ್ಯಕ್ಷೆ ಎಂ. ಮೀನಾಕ್ಷಿ ಗೌಡ ಉದ್ಘಾಟಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಮಹಮ್ಮದ್ ಮಜೀಫ್ ಮತ್ತು ದ್ವೀತಿಯ ಸ್ಥಾನ ಪಡೆದ ಅನಂತ್ ಹಾಗು ಶೇ.100 ಅಂಕ ಗಳಿಸಿದ 50 ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕ.ಸಾ.ಪ ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಗಿರಿಜಾ ಎಂ.ವಿ ಪ್ರಾರ್ಥಿಸಿ ಮಮತಾ ಎಂ. ಜೆ ಕಾರ್ಯಕ್ರಮ ನಿರೂಪಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.