ಬೆಳ್ಳಾರೆ: ಬೆಳ್ಳಾರೆ-ನಿಂತಿಕಲ್ಲು ಮುಖ್ಯ ರಸ್ತೆಯ ಪಂಜಿಗಾರಿನಲ್ಲಿ ಖಾಸಗಿ ಶಾಲಾ ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರೆ ಶಿಕ್ಷಕಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಪೆರುವಾಜೆಯ ನಿವಾಸಿ ಶಿಕ್ಷಕಿ ಶೈನಿ ಎಂಬವರು ತನ್ನ ಡಿಯೊ ಸ್ಕೂಟಿಯಲ್ಲಿ ಪಂಜಿಗಾರು ಶಾಲೆಗೆ ತೆರಳುತ್ತಿದ್ದ ಸಂದರ್ಭ ಬೆಳ್ಳಾರೆಯ ಖಾಸಗಿ ಶಾಲೆಯ ಬಸ್ಸು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಿತು. ಪರಿಣಾಮ ಶಿಕ್ಷಕಿ ಶೈನಿಯವರು ರಸ್ತೆಗೆ ಬಿದ್ದು ಗಾಯಗೊಂಡರು. ಕೂಡಲೆ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಶಿಕ್ಷಕಿಗೆ ತಲೆಯ ಭಾಗಕ್ಕೆ ಹಾಗು ಕೈಗಳಿಗೆ ಗಾಯಗಳಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…