ಸುಳ್ಯ: ಕೇರಳ- ಕರ್ನಾಟಕ ಗಡಿ ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಜನರು ಆತಂಕಗೊಂಡಿದ್ದಾರೆ.
ಮಂಡೆಕೋಲು ಗ್ರಾಮದ ಕಲ್ಲಡ್ಕ, ಪೆರಾಜೆ, ಕನ್ಯಾನ, ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿರುವ ಕಾಡಾನೆಗಳು ಕಳೆದ ರಾತ್ರಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಗ್ರೌಂಡ್ ನಲ್ಲಿ ಬೀಡು ಬಿಟ್ಟಿದ್ದವು. ಆನೆಗಳು ಸಮೀಪ ಪ್ರದೇಶದಲ್ಲಿ ಪುಡಿಗಟ್ಟಿದೆ. ಈಗ ಜನ ವಸತಿ ಪ್ರದೇಶದ ಸಮೀಪದಲ್ಲಿ ಅಕ್ಕಪ್ಪಾಡಿ ಭಾಗದ ಕಾಡಿನಲ್ಲಿ ಆನೆಗಳ ಬೀಡು ಬಿಟ್ಟಿದ್ದು ಜನರು ಭಯಭೀತರಾಗಿದ್ದಾರೆ. ಶಾಲೆ, ಅಂಗನವಾಡಿ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲು ಭಯಪಡುವ ಸ್ಥತಿ ನಿರ್ಮಾಣವಾಗಿದೆ. ಮರಿ ಆನೆ ಸೇರಿ ಹತ್ತಕ್ಕೂ ಹೆಚ್ಚು ಆನೆಗಳು ಬೀಡು ಬಿಟ್ಟಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…