ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.
ಆರಂಭದಲ್ಲಿ ಮುಕ್ಕೂರು ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಪ್ರದರ್ಶನಗೊಂಡಿತ್ತು. ಅನಂತರ ಅವನಿ ಕೋಡಿಬೈಲು ಅವರಿಂದ ಶಿವನ ಕುರಿತಾದ ವರ್ಣನೆಯ ಭರತನಾಟ್ಯ ಮತ್ತು ತ್ರಿನಯನ ನಾಟ್ಯಾಲಯದ ವಿದುಷಿ ಆರಾಧತಾ ಕಾಯರ್‍ಮಾರ್ ಅವರ ಭರತನಾಟ್ಯ ಪ್ರೇಕ್ಷಕ ವರ್ಗದ ಕಣ್ಮನ ಸೆಳೆಯಿತು.
ಅದಾದ ಬಳಿಕ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಅಪೇಕ್ಷಾ ಪೈ ಕಾಸರಗೋಡು ಅವರಿಂದ ಒಂದುವರೆ ಗಂಟೆಗಳ ಕಾಲ ನಡೆದ ಗಾನಯಾನ ಸಂಗೀತ ರಸಸಂಜೆ ಸಬಿಕರ ಮನ ತಣಿಸಿತು. ರಂಗದರಾಜೆ ಸುಂದರ ರೈ ಮಂದಾರ ಅವರ ನಿರ್ದೇಶನ ಮತ್ತು ಅಭಿನಯದ ಬಲೆ ತೆಲಿಪಾಲೆ ಕಾಮಿಡಿ ಎಕ್ಸ್‍ಪ್ರೆಸ್ ಕಾರ್ಯಕ್ರಮವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು. ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ಶಶಿಕುಮಾರ್ ಬಿ.ಎನ್. ನಿರೂಪಿಸಿದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…