ಗರ್ಭಪಾತಕ್ಕೆ ನೀಡಲಾಗಿದ್ದ ಗರಿಷ್ಠ ಅವಧಿಯ ಮಿತಿಯನ್ನು 20 ರಿಂದ 24 ವಾರಗಳಿಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮತಿ ನೀಡಿದೆ.
ಈ ಮೂಲಕ ತಾಯ್ತನದ ಮರಣ ಪ್ರಮಾಣ ಕಡಿಮೆ ಮಾಡುವುದು, ಮಹಿಳೆಯರ ಹಕ್ಕು, ಗರ್ಭಪಾತಕ್ಕೆ ಅವಕಾಶ ನೀಡುವ ಗರಿಷ್ಠ ಅವಧಿಯ ಮಿತಿಯನ್ನು ಹೆಚ್ಚಿಸುವುದು ಗರ್ಭದ ಸುರಕ್ಷಿತ ನಿರ್ಮೂಲನೆಯನ್ನು ಖಾತರಿಪಡಿಸಲಿದೆ ಮತ್ತು ಮಹಿಳೆಯರಿಗೆ ತಮ್ಮ ದೇಹದಲ್ಲಿ ಸಂತಾನೋತ್ಪತ್ತಿಯ ಹಕ್ಕನ್ನು ನೀಡುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ವೈದ್ಯಕೀಯ ಗರ್ಭಪಾತ ಕಾಯ್ದೆ, 1971ಕ್ಕೆ ತಿದ್ದುಪಡಿ ತರುವ ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಮಸೂದೆ, 2020ಕ್ಕೆ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.
ಗರ್ಭಪಾತಕ್ಕೆ 20 ವಾರಗಳ ಸಮಯ ಮಿತಿಯನ್ನು ನಿಗದಿಗೊಳಿಸಿರುವ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಕಳೆದ ಸಲ್ಲಿಸಲಾಗಿದ್ದ ಅರ್ಜಿಗೆ ಸೆಪ್ಟೆಂಬರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ಸರ್ಕಾರ, ಗರ್ಭದಲ್ಲಿರುವ ಭ್ರೂಣದ ಜೀವ ರಕ್ಷಣೆ ನಾಗರಿಕರ ಪೋಷಕನಾದ ತನ್ನ ಕರ್ತವ್ಯ ಎಂದು ಹೇಳಿತ್ತು. ಅರ್ಜಿದಾರರು ಗರ್ಭಪಾತದ ಗರಿಷ್ಠ ಮಿತಿಯನ್ನು 26 ವಾರಕ್ಕೆ ಏರಿಸಲು ಕೋರಿದ್ದರು.
ಈ ತಿದ್ದುಪಡಿ ಮಸೂದೆಯು ದೀರ್ಘಕಾಲದವರೆಗೂ ತಾವು ಗರ್ಭ ಧರಿಸಿರುವುದು ಅರಿಯದೆ ಬಳಿಕ ಅನಿವಾರ್ಯವಾಗಿ ಮಗುವಿಗೆ ಜನ್ಮನೀಡುವ ಸ್ಥಿತಿಗೆ ಒಳಗಾಗುವ ಅತ್ಯಾಚಾರ ಸಂತ್ರಸ್ತೆಯರು, ಅಂಕವೈಕಲ್ಯವುಳ್ಳ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರಿಗೆ ಈ ಮಿತಿ ವಿಸ್ತರಣೆ ನೆರವಾಗಲಿದೆ ಎಂದು ಜಾವಡೇಕರ್ ಹೇಳಿದರು.
( ಕೃಪೆ – ANI)
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…