ಸುಳ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 15೦ನೇ ಜನ್ಮದಿನವಾದ ಅಕ್ಟೋಬರ್ 2 ರಂದು ಸುಳ್ಯದ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಸಂಚಾಲಕ ಹರೀಶ್ ಬಂಟ್ವಾಳ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಗಾಂಧಿ ಚಿಂತನೆಯ ಪ್ರಸರಣ ಕಾರ್ಯ ನಡೆಸಬೇಕೆಂಬ ಉದ್ದೇಶದಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ 15ಕಿ.ಮೀ ನಡಿಗೆಯನ್ನು ಆಯೋಜಿಸಿದೆ.
ಯುವಜನ ಸಂಯುಕ್ತ ಮಂಡಳಿ ಸುಳ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಬೆಳ್ಳಾರೆಯಲ್ಲಿ ಗಾಂಧಿನಡಿಗೆಯ ಉದ್ಘಾಟನೆ ನಡೆಯಲಿದೆ. ಬಳಿಕ ನಡಿಗೆ ಸಾಗಿ ಬರುವ ಕಡೆಗಳಲ್ಲಿ ನಾಟಕ ಪ್ರದರ್ಶನ, ಭಜನೆ, ದೇಶಭಕ್ತಿಗೀತೆ, ಮೊದಲಾದವುಗಳ ಜೊತೆಗೆ ಕಿರುಸಭಾ ಕಾರ್ಯಕ್ರಮಗಳು ನಡೆಯಲಿದೆ. ಅಪರಾಹ್ನ 3 ಗಂಟೆಗೆ ಸುಳ್ಯಕ್ಕೆ ತಲುಪುವ ನಡಿಗೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯವರು ಹಮ್ಮಿಕೊಳ್ಳುವ ಗಾಂಧಿಜಯಂತಿಯೊಂದಿಗೆ ಸೇರಿಕೊಂಡು ಗಾಂಧಿ ಚಿಂತನಾ ಉಪನ್ಯಾಸದೊಂದಿಗೆ ಸಮಾರೋಪಗೊಳ್ಳಲಿದೆ.
ಗಾಂಧಿ ನಡಿಗೆಯಲ್ಲಿ 150 ಮಂದಿ ಪೂರ್ಣವಾಗಿ ಭಾಗವಹಿಸುತ್ತಾರೆ. ಈ 150 ಮಂದಿಗೆ ಗಾಂಧಿ ಚಿಂತನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಸೆಪ್ಟಂಬರ್ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಗಾಂಧಿ ಚಿಂತನ ವೇದಿಕೆಯ ಸಂಚಾಲಕರುಗಳಾದ ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಉಷಾ ಕಲ್ಯಾಣಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ ಪೆರಾಜೆ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…