Advertisement
ಸುದ್ದಿಗಳು

ಗಾಂಧೀ ಕಲ್ಪನೆ ಮೋದಿಯಿಂದ ಅನುಷ್ಠಾನ- ನಳಿನ್‍ಕುಮಾರ್ ಕಟೀಲ್ : ಸುಳ್ಯದಲ್ಲಿ ಬಿಜೆಪಿ ವತಿಯಿಂದ ಗಾಂಧೀ ಸಂಕಲ್ಪ ಯಾತ್ರೆ

Share

ಸುಳ್ಯ; ಗುಜರಾತಿನಿಂದ ಹುಟ್ಟಿ ಬಂದ ಮಹಾತ್ಮಾ ಗಾಂಧೀಯವರು ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ದೇಶದ ಬಗ್ಗೆ ಅಂದು ಮಹಾತ್ಮಾ ಗಾಂಧೀಜಿಯವರು ಕಂಡಿದ್ದ ಕಲ್ಪನೆಯನ್ನೂ, ಕನಸನ್ನೂ ಇಂದು ಗುಜರಾತಿನಿಂದ ಬಂದ ಪ್ರಧಾನಿ ನರೇಂದ್ರ ಮೋದಿಯವರು ಸಾಕಾರಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.

Advertisement
Advertisement

ಮಹಾತ್ಮಾ ಗಾಂಧೀಜಿಯ 150ನೇ ಜನ್ಮ ಜಯಂತಿಯ ಅಂಗವಾಗಿ ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಹಮ್ಮಿಕೊಂಡ ಗಾಂಧಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗಾಂಧಿಯ ಸ್ಮರಣೆಯಲ್ಲಿ ಅಧಿಕಾರ ಅನುಭವಿಸಿದವರು ಗಾಂಧೀಜಿಯ ಕಲ್ಪನೆಯ ಸಾಕಾರಕ್ಕೆ ಪ್ರಯತ್ನ ನಡೆಸಲಿಲ್ಲ. ಆದರೆ ನರೇಂದ್ರ ಮೋದಿಯವರು ಮಹಾತ್ಮಾ ಗಾಂಧೀಜಿಯವರ ಚಿಂತನೆ, ವಿಚಾರಧಾರೆಯನ್ನು ಅನುಸರಿಸಿ ಆಡಳಿತ ನಡೆಸುತ್ತಿದ್ದಾರೆ. ಗಾಂಧೀ ಕಲ್ಪನೆಯ ಸ್ವಚ್ಛ ಭಾರತ, ಕಟ್ಟ ಕಡೆಯ ವ್ಯಕ್ತಿಗೂ ಸರಕಾರಿ ಸೌಲಭ್ಯ ದೊರಕಿಸಿ ಕೊಡುವ ಮೂಲಕ ಗ್ರಾಮ ಸ್ವರಾಜ್ಯದ ಅನುಷ್ಠಾನಕ್ಕೆ ಶ್ರಮಿಸುತ್ತಿದ್ದಾರೆ ಎಂದರು.

Advertisement

ಗಾಂಧೀ ಕಲ್ಪನೆಯು ಸಾಕಾರವಾಗುವುದರ ಜೊತೆಗೆ ಗಾಂಧೀಜಿಯ ಆದರ್ಶಗಳು ಹಳ್ಳಿ ಹಳ್ಳಿಗೆ ತಲುಪಬೇಕು, ಮುಂದಿನ ತಲೆಮಾರಿಗೂ ಗಾಂಧೀಜಿಯ ಆದರ್ಶ ತಲುಪಬೇಕು ಎಂಬ ದೃಷ್ಠಿಯಲ್ಲಿ ಗಾಂಧೀ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ಮಂದಿ ಬಲಿದಾನ, ತ್ಯಾಗ ಮಾಡಿದ್ದಾರೆ. ಕ್ರಾಂತಿಕಾರಕ ರೀತಿಯಲ್ಲಿ ಹಲವು ಮಂದಿ ಹೋರಾಟ ನಡೆಸಿದ್ದಾರೆ. ಆದರೆ ಕ್ರಾಂತಿಕಾರಿ ಹೋರಾಟದಿಂದ ಮಾತ್ರ ಸ್ವಾತಂತ್ರ್ಯ ಪಡೆಯುವುದು ಸಾಧ್ಯವಿಲ್ಲ ಎಂದು ಅರಿತು ಮಹಾತ್ಮಾ ಗಾಂಧೀಯವರು ಅಹಿಂಸಾತ್ಮಕವಾದ ಹೋರಾಟದ ಮೂಲಕ ಸ್ವಾತಂತ್ರ್ಯ ಪಡೆದರು. ಭಜನೆಯ ಮೂಲಕ ಎಲ್ಲರನ್ನೂ ಒಟ್ಟಾಗಿ ದೇಶ ಭಕ್ತಿಯನ್ನು ಉದ್ದೀಪನಗೊಳಿಸಿದರು, ಸತ್ಯಾಗ್ರಹದ ಮೂಲಕ ಹೋರಾಟವನ್ನು ಸಂಘಟಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಸೇರಿ ದೇಶದಾದ್ಯಂತ ರಾಷ್ಟ್ರ ಭಕ್ತಿ ಉದ್ದೀಪನಗೊಳ್ಳಲು ಗಾಂಧೀಜಿ ಪ್ರೇರಣೆಯಾಗಿದ್ದರು ಎಂದರು.

Advertisement

ಸ್ವಾತಂತ್ರ್ಯ ಹೋರಾಟವನ್ನು ನಗಣ್ಯ ಮಾಡುವುದು ಸರಿಯಲ್ಲ: ಹಲವಾರು ಮಂದಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಜೈಲು ಶಿಕ್ಷೆ ಅನುಭವಿಸಿದ್ದಾರೆ. ಆದರೆ ಹಲವಾರು ವರ್ಷಗಳ ಕಾಲ ಜೈಲು ವಾಸ, ಸ್ವಾತಂತ್ರ್ಯಕ್ಕಾಗಿ ಕಠಿಣ ಶಿಕ್ಷೆ ಅನುಭವಿಸಿದವರಿಗೆ ಭಾರತ ರತ್ನ ನೀಡಿ ಗೌರವಿಸುತ್ತೇವೆ ಎಂದರೆ ನಮ್ಮ ದೇಶದಲ್ಲಿ ಹಲವರ ಕಣ್ಣು ಕೆಂಪಾಗುತ್ತದೆ. ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರ ಹೋರಾಟವನ್ನು ನಗಣ್ಯವಾಗಿ ಕಾಣುವುದು ದುರದೃಷ್ಟ ಎಂದು ನಳಿನ್‍ಕುಮಾರ್ ಕಟೀಲ್ ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಎಸ್.ಅಂಗಾರ, ಯುವ ಪೀಳಿಗೆಗೆ ಮಹಾತ್ಮಾಗಾಂಧೀಜಿಯ ವಿಚಾರಧಾರೆಗಳ ಬಗ್ಗೆ ಚಿಂತನೆಗಳ ಬಗ್ಗೆ ತಿಳಿಸುವುದರ ಜೊತೆಗೆ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ ಇದೆ. ಸ್ವಚ್ಛತೆ, ನೀರು, ಪರಿಸರದ ಬಗ್ಗೆಯೂ ಹೆಚ್ಚಿನ ಜಾಗೃತಿ ಮತ್ತು ಕಾಳಜಿ ಬೆಳೆಸಿಕೊಳ್ಳಬೇಕು ಎಂದರು.

Advertisement

ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಮುಖ್ಯ ಅತಿಥಿಯಾಗಿದ್ದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ವಂದಿಸಿದರು. ವಿನಯಕುಮಾರ್ ಕಂದಡ್ಕ ಕಾರ್ಯಕ್ರಮ ನಿರೂಪಿಸಿದರು.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

11 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago