ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ಗಾಳಿಯಲ್ಲಿ ಕೂಡಾ ವೈರಸ್ ಹರಡಬಲ್ಲುದು ಎಂದು 32 ದೇಶಗಳ 239 ವಿಜ್ಞಾನಿಗಳು ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಕೊರೋನಾ ವೈರಸ್ ಹೊಂದಿರುವ ವ್ಯಕ್ತಿ ಸೀನಿದ ನಂತರ ಗಾಳಿಯ ಮೂಲಕ ವೈರಸ್ ಕಣಗಳು ಹರಡುತ್ತವೆ. ಗಾಳಿಯಲ್ಲಿರುವ ಕಣಗಳು ಉಸಿರಾಟದ ಮೂಲಕ ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಸಮುದಾಯಕ್ಕೆ ಕೊರೋನಾ ವೈರಸ್ ಹರಡಿದ ಬಳಿಕ ಗಾಳಿಯ ಮೂಲಕ ಹರಡುವ ಸಾಧ್ಯತೆ ಹೆಚ್ಚು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇದುವರೆಗೆ ಕೊರೋನಾ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಮಾತ್ರ ಹರಡಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ ವಿಜ್ಞಾನಿಗಳ ಈ ಮಾಹಿತಿ ಇಡೀ ವಿಶ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ.
( ಎ ಎನ್ ಐ )
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…