ಪಂಜ: ಸಮಾಜಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಣ ಸಂಸ್ಥೆಗಳು ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಸಂಘಸಂಸ್ಥೆಗಳು ಸರಕಾರದ ಜೊತೆಯಲ್ಲಿ ಕೈ ಜೋಡಿಸಬೇಕು. ಆದ್ದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಸಮಾಜದಲ್ಲಿ ಮುಂದುವರಿಯಬಹುದು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು.
ಅವರು ಗಾಂಧೀಜಯಂತಿಯಂದು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇಲ್ಲಿಗೆ ಎಂ.ಆರ್.ಪಿ.ಎಲ್. ಮಂಗಳೂರು 11.46 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿಕೊಟ್ಟ ಶೌಚಾಲಯ ಕಟ್ಟಡವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಗಾಂಧೀಜಯಂತಿಯ ದಿನಾಚರಣೆಯಂದು ಪ್ರತಿಯೊಬ್ಬರೂ ವ್ಯಸನಮುಕ್ತ, ಸ್ವಚ್ಛಭಾರತದ ಕಡೆಗೂ ಗಮನಹರಿಸಬೇಕಾದ ಅಗತ್ಯವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್ ವಹಿಸಿ ಪ್ಲಾಸ್ಲಿಕ್ ಮುಕ್ತ ಸಮಾಜ ನಿರ್ಮಾಣವಾಗಬೇಕು ಜೊತೆಯಲ್ಲಿ ಗಾಂಧೀಜಿಯ ಸ್ವಚ್ಛಭಾರತದ ಕನಸು ನನಸುಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಹಿರಿದು ಎಂಬ ಸಂದೇಶವನ್ನು ನೀಡಿದರು.
ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚೀನಪ್ಪ ಕಾಣಿಕೆ, ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷ ಸೋಮಶೇಖರ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಶಶಿಧರ ಪರಮಲೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಗಾಯತ್ರಿ ಬಿ.ಎಸ್. ಪ್ರಾರ್ಥಿಸಿದರು. ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ಸ್ವಾಗತಿಸಿದರು. ಶಶಿಧರ ಪಿ. ವಂದಿಸಿದರು. ಕನ್ನಡ ಉಪನ್ಯಾಸಕ ವೆಂಕಪ್ಪ ಗೌಡ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490