ಸುಳ್ಯ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡೆಂಘೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದೆ. ಇದರಲ್ಲಿ ಗುತ್ತಿಗಾರು , ಬಳ್ಪ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ. ಗುತ್ತಿಗಾರು ಸರಕಾರಿ ಆಸ್ಪತ್ರೆಗೆ ಗ್ರಾಮೀಣ ಭಾಗದಿಂದ ಜ್ವರದ ಲಕ್ಷಣಗಳಿಂದ ಬರುತ್ತಿದ್ದು ದಿನೇ ದಿನೇ ಜ್ವರ ಬಾಧಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇಲಾಖೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದರೂ ಮಳೆ ಹಾಗೂ ಬಿಸಿಲಿನ ಕಾರಣದಿಂದ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹೇಳುತ್ತಾರೆ. ಈಗಾಗಲೇ ಗುತ್ತಿಗಾರಿನಲ್ಲಿ 2 ಜನರಿಗೆ ಡೆಂಘೆ ದೃಢಪಟ್ಟರೆ 10 ಕ್ಕೂ ಅಧಿಕ ಮಂದಿಯ ರಕ್ತದ ಸ್ಯಾಂಪಲ್ ಖಾಸಗಿಯಾಗಿ ಕಳುಹಿಸಲಾಗಿದೆ. ಖಾಸಗಿ ವೈದ್ಯರು ನಿನ್ನೆ ಹಾಗೂ ಇಂದು ಸೇರಿ ಒಟ್ಟು 4 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯ ಹಾಗೂ ಪುತ್ತೂರಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿದ್ದಾರೆ.
ಈಗ ಸಾರ್ವಜನಿಕರೇ ಎಚ್ಚರ ವಹಿಸಬೇಕಾಗಿದ್ದು ಜ್ವರ ಬಂದ ತಕ್ಷಣವೇ ಮುಂಜಾಗ್ರತಾ ಕ್ರಮ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕಿದೆ.
2015-16 ರಲ್ಲಿ ಡೆಂಘೆ ಜ್ವರಕ್ಕೆ ಗುತ್ತಿಗಾರು ಗ್ರಾಮ ತತ್ತರಿಸಿತ್ತು. ಹಲವಾರು ಮಂದಿ ಡೆಂಘೆ ಜ್ವರದಿಂದ ಬಳಲಿದ್ದರು. ಆರೋಗ್ಯ ಇಲಾಖೆ ಆರಂಭದಲ್ಲಿ ಡೆಂಘೆ ಜ್ವರ ಇಲ್ಲವೆಂದು ಹೇಳಿತ್ತು, ಕೊನೆಗೆ ನಿಯಂತ್ರಣಕ್ಕೆ ಬಾರದಾಗಿತ್ತು. ಈ ಬಾರಿಯೂ ಮಳೆ ಹಾಗೂ ಬಿಸಿಲಿನ ವಾತಾವರಣ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …