ಗುತ್ತಿಗಾರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇದರ ಆತಿಥ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ದ.ಕ . ಇದರ ವತಿಯಿಂದ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ದಿ ಪಂದ್ಯಾಟವು ಜರುಗಿತು.
ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ .ಕೆ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ್ ಆಗಮಿಸಿದ್ದರು. ವೇದಿಕೆಯಲ್ಲಿ ಗ್ರಾಪಂ ಸದಸ್ಯೆ ಶ್ರೀದೇವಿ ಕೊಂಬೊಟ್ಟು ,
ವಿರಮಾರುತಿ ಸ್ಫೋಟ್ಸ್ ಕ್ಲಬ್ ವಿಜೇಶ್ ಹಿರಿಯಡ್ಕ ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ವಿವಿಧ ಶಾಲೆಗಳು ಈ ಕ್ರೀಡಾ ಕೂಟದಲ್ಲಿ ಸ್ಪೂರ್ತಿಯಿಂದ ಭಾಗವಹಿಸಿದ್ದು ಬಾಲಕರ ವಿಭಾಗದಲ್ಲಿ ಜ್ಞಾನದೀಪ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಎಲಿಮಲೆ ಪ್ರಥಮ ಸ್ಥಾನ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಪ್ರಥಮ ಸ್ಥಾನ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಕುಳಿ ದ್ವಿತೀಯ ಸ್ಥಾನ ಗಳಿಸಿಕೊಂಡಿತು.
ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಜಯಂತಿ ಅಮೆ ವಹಿಸಿದ್ದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ .ಕೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರು , ಎಲ್.ಕೆ.ಜಿ&ಯು.ಕೆ.ಜಿ ಸಮಿತಿ ಅಧ್ಯಕ್ಷ ಕುಲಶ್ರೀ ಬಾಕಿಲ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು.
ಕಮಲಾಕ್ಷಿ ಪಿ. ಮುಖ್ಯ ಶಿಕ್ಷಕರು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ಮುತ್ಲಾಜೆ ವಂದಿಸಿದರು. ಶಶಿಧರ ಮಾವಿನಕಟ್ಟೆ ಕಾರ್ಯಕ್ರಮವನ್ನು ನಿರೂಪಿಸಿದರು.