ಗುತ್ತಿಗಾರು: ಗುತ್ತಿಗಾರು ಹವ್ಯಕ ವಲಯ ಮತ್ತು ಅನೂಚಾನ ವಿದ್ಯಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಯಜುರುಪಾಕರ್ಮ ಮತ್ತು ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವೇ.ಮೂ. ಮುರಳೀಕೃಷ್ಣ ಭಟ್ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ನಿವೃತ್ತಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ವೇ.ಮೂ. ಕರುವಜೆ ಕೇಶವ ಜೋಯಿಸರು, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವೇ.ಮೂ. ಸುಬ್ರಾಯ ಕೆದಿಲಾಯ ವಳಲಂಬೆ , ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ , ವೇ.ಮೂ. ಮಹಾಬಲೇಶ್ವರ ಭಟ್ , ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಕೃಷ್ಣ ಗುಂಡಿಮಜಲು, ವಲಯಾಧ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು, ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ , ಕೊಶಾಧಿಕಾರಿ ಸತ್ಯನಾರಾಯಣ ಹೊನ್ನಡಿ, ಅನೂಚಾನ ವಿದ್ಯಾ ಪ್ರತಿಷ್ಠಾನದ ಕಾರ್ಯದರ್ಶಿ ಶಿವರಾಮ ಕರುವಜೆ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…