ಗುತ್ತಿಗಾರು ಸಹಕಾರಿ ಸಂಘದಿಂದ ಗೇರುಬೀಜ ಖರೀದಿ | ಕೃಷಿಕರ ನೆರವಿಗೆ ಬಂದ ಸಹಕಾರಿ ಸಂಸ್ಥೆ |

April 11, 2020
10:40 PM

ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ  ಕೃಷಿ ವಸ್ತುಗಳ ಮಾರಾಟಕ್ಕೆ ಅವಕಾಶವಿಲ್ಲದೆ ಕೃಷಿಕರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಇಂತಹ ಸಂದರ್ಭದಲ್ಲಿ  ಕೃಷಿಕರಿಗೆ ನೆರವಾಗಲು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂದೆ ಬಂದಿದೆ. ಸಹಕಾರಿ ಸಂಘದ ಸದಸ್ಯರಿಂದ ಹಾಗೂ ಕೃಷಿಕರಿಂದ ಗೇರುಬೀಜ ಖರೀದಿಸಲು ನಿರ್ಧರಿಸಿದ್ದು ಎ.13 ರಿಂದ ಖರೀದಿ ನಡೆಯಲಿದೆ.

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಎ.13 ರಿಂದ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ತನಕ ದೇವಚಳ್ಳ ,ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮದ ಸಹಕಾರಿ ಸಂಘದ  ಸದಸ್ಯರುಗಳಿಗೆ ಹಾಗೂ ರೈತರಿಂದ ಖರೀದಿ ನಡೆಯಲಿದೆ. ಸದ್ಯ  ಕೆ.ಜಿ ಗೆ ಗರಿಷ್ಟ 70 ರೂಪಾಯಿಯಂತೆ ನೀಡುವುದೆಂದು ಸಂಘದ ಆಡಳಿತ ಮಂಡಳಿಯವರು ತೀರ್ಮಾನ ಮಾಡಿದೆ.

ಗೇರುಬೀಜ ಖರೀದಿ ಬಗ್ಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇತೃತ್ವದಲ್ಲಿ ನಿರ್ದೇಶಕರುಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಸಭೆ ನಡೆಸಿ ಕೃಷಿಕರಿಗೆ ನೆರವಾಗುವ ವಿಶೇಷ ಯೋಜನೆಯನ್ನು  ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಹಕಾರಿ ಸಂಘವು ಮಾದರಿಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror