ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಕೃಷಿ ವಸ್ತುಗಳ ಮಾರಾಟಕ್ಕೆ ಅವಕಾಶವಿಲ್ಲದೆ ಕೃಷಿಕರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿಕರಿಗೆ ನೆರವಾಗಲು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂದೆ ಬಂದಿದೆ. ಸಹಕಾರಿ ಸಂಘದ ಸದಸ್ಯರಿಂದ ಹಾಗೂ ಕೃಷಿಕರಿಂದ ಗೇರುಬೀಜ ಖರೀದಿಸಲು ನಿರ್ಧರಿಸಿದ್ದು ಎ.13 ರಿಂದ ಖರೀದಿ ನಡೆಯಲಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಎ.13 ರಿಂದ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ತನಕ ದೇವಚಳ್ಳ ,ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮದ ಸಹಕಾರಿ ಸಂಘದ ಸದಸ್ಯರುಗಳಿಗೆ ಹಾಗೂ ರೈತರಿಂದ ಖರೀದಿ ನಡೆಯಲಿದೆ. ಸದ್ಯ ಕೆ.ಜಿ ಗೆ ಗರಿಷ್ಟ 70 ರೂಪಾಯಿಯಂತೆ ನೀಡುವುದೆಂದು ಸಂಘದ ಆಡಳಿತ ಮಂಡಳಿಯವರು ತೀರ್ಮಾನ ಮಾಡಿದೆ.
ಗೇರುಬೀಜ ಖರೀದಿ ಬಗ್ಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇತೃತ್ವದಲ್ಲಿ ನಿರ್ದೇಶಕರುಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಸಭೆ ನಡೆಸಿ ಕೃಷಿಕರಿಗೆ ನೆರವಾಗುವ ವಿಶೇಷ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಹಕಾರಿ ಸಂಘವು ಮಾದರಿಯಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?