ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು. ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…