ಪುತ್ತೂರು: ದೇಯಿಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಲ್‍ನಲ್ಲಿ ಕೊಡಿಮರ ಕೆತ್ತನೆ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಸ್ತಪತಿ ಉಮೇಶ್ ಬಳ್ಪ ಮತ್ತವರ ತಂಡ ಮರದ ಕೆತ್ತನೆ ಆರಂಭಿಸಿತು. ಇದಕ್ಕೂ ಮುನ್ನ ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಮೇ 8ರಂದು ಗೆಜ್ಜೆಗಿರಿಯಲ್ಲಿ ಕೊಡಿಮರವನ್ನು ಎಳ್ಳೆಣ್ಣೆಯಲ್ಲಿ ಅದ್ದಿಡುವ ತೈಲಾಧಿವಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಲೋಕೇಶ್ ಶಾಂತಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕೊಡಿಮರವನ್ನು ಕೆತ್ತಿ ಸಿದ್ಧಪಡಿಸಲಾಗುತ್ತದೆ. ಮೇ 8ರಂದು ಬೆಳಗ್ಗೆ 9.30ಕ್ಕೆ ತೈಲಧಿವಾಸ ಮುಹೂರ್ತ ನಡೆಯಲಿದೆ.
ಪ್ರಸ್ತುತ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮಚಾವಡಿ, ಮಾತೆಯ ಮಹಾಸಮಾಧಿ, ಧೂಮಾವತಿ ಮತ್ತು ಕುಪ್ಪೆ ಪಂಜುರ್ಲಿ ದೈವಸ್ಥಾನ, ಚಾರಿತ್ರಿಕ ಸರೋಳಿ ಸೈಮಂಜಕಟ್ಟೆ, ಬೆರ್ಮೆರ್ ಗುಂಡ ಪುನರುತ್ಥಾನ ಕಾರ್ಯ ಮುಕ್ತಾಯ ಹಂತದಲ್ಲಿದ್ದು, ಮೂಲಸ್ಥಾನ ಗರಡಿ ನಿರ್ಮಾಣದ ಎರಡನೇ ಹಂತದ ಕಾಮಗಾರಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ. 450 ವರ್ಷಗಳ ಹಿಂದೆ ಅವಳಿ ವೀರರು ಕೋಟಿ ಚೆನ್ನರು ಬಾಳಿ ಬೆಳಗಿದ ಕ್ಷೇತ್ರದಲ್ಲಿ ಮೂಲಸ್ಥಾನ ಪುನರುತ್ಥಾನ ಕಾರ್ಯ ಇದೇ ಮೊದಲ ಬಾರಿ ನಡೆಯುತ್ತಿದ್ದು, ಐತಿಹಾಸಿಕ ತಾಣಗಳು ಮತ್ತೆ ಜೀವ ಪಡೆದುಕೊಳ್ಳುತ್ತಿವೆ.
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…