ಲಂಡನ್: ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಗೆಲುವು ದಾಖಲಿಸಿದರೂ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲಾಗದೆ ಟೂರ್ನಿಯಿಂದ ಹೊರಬಿದ್ದಿದೆ.
ಆರಂಭಿಕ ಆಟಗಾರ ಇಮಾಮ್-ಉಲ್-ಹಕ್ (100) ಶತಕ ಹಾಗೂ ಶಾಹೀನ್ ಆಫ್ರಿದಿ (35ಕ್ಕೆ 6) ಅವರ ಬಿರುಗಾಳಿ ಬೌಲಿಂಗ್ ನೆರವಿನಿಂದ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ 94 ರನ್ಗಳಿಂದ ಗೆಲುವು ಸಾಧಿಸಿತು. ಎದುರಾಳಿ ತಂಡವನ್ನು 7 ರನ್ಗಳಿಗೆ ಆಲೌಟ್ ಮಾಡುವ ಅಸಾಧ್ಯ ಗುರಿಯನ್ನು ಸಾಧಿಸಲಾಗದೆ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿತು.
ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿತು. ಗೆಲ್ಲಲು 316 ರನ್ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 44.1 ಓವರ್ಗಳಲ್ಲಿ 221 ರನ್ಗಳಿಗೆ ಆಲೌಟ್ ಸೋಲೊಪ್ಪಿಕೊಂಡು.
ಪಾಕಿಸ್ತಾನದ ಪರ ಬಾಬರ್ ಅಜಂ (98 ) ಶತಕದಂಚಿನಲ್ಲಿ ಎಡವಿದರು. ಬಾಂಗ್ಲಾ ಪರ ಮುಸ್ತಿಫಿಜುರ್ ರಹಮಾನ್ 75ಕ್ಕೆ 5 ಮತ್ತು ಮೊಹಮ್ಮದ್ ಸೈಫುದ್ದೀನ್ 77ಕ್ಕೆ 3 ವಿಕೆಟ್ ಕಬಳಿಸಿದರು.
ಬಾಂಗ್ಲಾದೇಶ ಶಕೀಬ್ ಆಲ್ ಹಸನ್ (66) ಮತ್ತು ಲಿಟನ್ ದಾಸ್ (32) ಉತ್ತಮ ಆಟವಾಡಿದರು. ಆದರೆ ಉಳಿದವರಿಂದ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ. ಬೌಲಿಂಗ್ನಲ್ಲಿ ಪಾಕ್ನ ಶಾಹೀನ್ ಶಬ್ದಾದ್ ಖಾನ್ 59ಕ್ಕೆ 2 ವಿಕೆಟ್ ಉರುಳಿಸಿದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…