Advertisement
ಕಾರ್ಯಕ್ರಮಗಳು

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆ ಆಚರಣೆ

Share

ಪುತ್ತುರು: ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆಯನ್ನು26 ರಂದು ಆಚರಿಸಲಾಯಿತು.  ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಎ. ಸಿ. ಜೆ. ಎಮ್. ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ ಮಂಜುನಾಥ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ವಿಶೇಷ ಅತಿಥಿಗಳಾಗಿ  ಪ್ರಧಾನ ಹಿರಿಯ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ  ಪ್ರಕಾಶ್ ಪಿ. ಎಮ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರಿನ ವಕೀಲರು ಹಾಗೂ ಸದಸ್ಯರಾದ ಉದಯ ಶಂಕರ್ ಶೆಟ್ಟಿ, ಪುತ್ತೂರಿನ ಹೆಚ್ಚುವರಿ ಸರಕಾರಿ ಪ್ಲೀಡರ್ ಪ್ರವೀಣ್ ಕುಮಾರ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲರಾದ ಪ್ರೋ. ಕ್ಷೇವಿಯರ್ ಡಿ’ಸೋಜರವರು ಭಾಗವಹಿಸಿದ್ದರು. ಪುತ್ತೂರಿನ ವಕೀಲರ ಸಂಘದ  ಅಧ್ಯಕ್ಷರಾದ ಮನೋಹರ್ ಕೆ. ವಿ,  ಸುರೇಶ್ ರೈ, ಕಾರ್ಯದರ್ಶಿಗಳಾದ ಮಂಜುನಾಥ್ ಎನ್ ಎಸ್, ಸಹಕಾರ್ಯದರ್ಶಿ ಮಮತಾ ಸುವರ್ಣ,  ಇವರು ವಿಶೇಷ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಸಂಸ್ಥೆಯ ನಿರ್ದೇಶಕರಾದ ಡಾ. ಎಮ್. ಜಿ ನಾಯಕ್ ರವರು ಅತಿಥಿಗಳನ್ನು ಸ್ವಾಗತಿಸುತ್ತಾ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ ಬಗ್ಗೆ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿದ  ಮಂಜುನಾಥ್ ಮಾತನಾಡುತ್ತಾ ಭಾರತವೊಂದು ಜಾತ್ಯತೀತ ರಾಷ್ಟ್ರವಾಗಿದ್ದು ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆಯೆಂದು ತಿಳಿಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿವೇಕಾನಂದ ಕಾನೂನು ವಿದ್ಯಾಲಯ ಪುತ್ತೂರಿನ ಕಾನೂನು ಸೇವೆ ನಿರ್ದೇಶಕರಾದ ಡಾ. ಬಿ ಕೆ ರವೀಂದ್ರರವರು, “ಭಾರತದ ಸಂವಿಧಾನ ಮತ್ತು ಪ್ರಜೆಗಳ ಕರ್ತವ್ಯ” ಎನ್ನುವ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಭಾರತದ ಸಂವಿಧಾನವು ಪ್ರಪಂಚಕ್ಕೇ ಮಾದರಿಯಾಗಿದ್ದು ಪ್ರಜೆಗಳ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳಿಗೆ ಮಹತ್ವ ಕೊಟ್ಟಿದೆ. ಭಾರತದ ಸಂವಿಧಾನದೊಂದಿಗೆ ಅಮೆರಿಕಾ, ರಷ್ಯಾ ಹಾಗು ಫ್ರಾನ್ಸ್ ಸಂವಿಧಾನಗಳ ಬಗೆಗೂ ಮಾಹಿತಿ ನೀಡಿ ಅವುಗಳು ಪ್ರಜೆಗಳಿಗೆ ನೀಡಿದ ಹಕ್ಕುಗಳ ಬಗ್ಗೆ ತಿಳಿಹೇಳಿದರು. ಭಾರತದ ಸಂವಿಧಾನವು ಯಾವುದೇ ಬೇಧ ಭಾವ ಮಾಡದೇ ಸಮಾನ ನಾಗರಿಕ ಹಕ್ಕುಗಳನ್ನು ನೀಡಿದ್ದು ಅವುಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮನೋಹರ್ ಕೆವಿ, ಉದಯಶಂಕರ್ ಶೆಟ್ಟಿ ಹಾಗು ಪ್ರೊ. ಕ್ಷೇವಿಯರ್ ಡಿಸೋಜಾ ರವರು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ. ವನಿತಾ ಕೆ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ಪ್ರಕಾಶ್ ಜಿ ಭಟ್ ರವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

17 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

17 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago