Advertisement
ಕೃಷಿ

ಗೇರು ಸಂಶೋಧನಾ ನಿರ್ದೇಶನಾಲಯದಿಂದ ಕೃಷಿ ಸಲಕರಣೆಗಳ ವಿತರಣೆ

Share

ಪುತ್ತೂರು: ಕೇಂದ್ರ ಸರಕಾರದ ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಕೊಡಮಾಡುವ ಸವಲತ್ತುಗಳನ್ನು ಪುತ್ತೂರಿನ ಮೊಟ್ಟೆತ್ತಡ್ಕದ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಫಲಾನುಭವಿಗಳಿಗೆ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್ ರವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್,  ಪರಿಶಿಷ್ಟ ಜಾತಿಯವರು ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಕೇಂದ್ರ ಸರ್ಕಾರ ಸಾಕಷ್ಟು ನೆರವನ್ನು ಕೊಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.

Advertisement
Advertisement
Advertisement

ಈ ಸಂದರ್ಭದಲ್ಲಿ ಅವರು ಆಯ್ದ ರೈತರಿಗೆ ತೋಟಗಳಿಗೆ ಔಷಧಿ ಸಿಂಪಡಣಾ ಯಂತ್ರಗಳನ್ನು ಮತ್ತು ಮರವೇರುವ ಅಲ್ಯುಮಿನಿಯಂನ ಏಣಿಗಳನ್ನು ವಿತರಿಸಿದರು.

Advertisement

ಅತಿಥಿಗಳನ್ನು ಹಾಗೂ ಫಲಾನುಭವಿಗಳನ್ನು ಸ್ವಾಗತಿಸಿದ ಸಂಸ್ಥೆಯ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಈ ಉಪಯೋಜನೆಗಳ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಮುಂದಿನ ವರ್ಷದಲ್ಲಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಹಳಷ್ಟು ಧನ ಸಹಾಯ ಕೇಂದ್ರದಿಂದ ಬಂದಿದ್ದು ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆಯೆಂದರು. ಗೇರು ಅಥವಾ ಇತರ ಕೃಷಿ ತೋಟಗಳ ನಿರ್ಮಾಣ, ನಿರ್ವಹಣೆ, ಬೇಕಾದ ಸಲಕರಣೆಗಳು, ಯಂತ್ರ ಉಪಕರಣಗಳು, ಕೋಳಿ, ಆಡು ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಾಣೆ, ವೃತ್ತಿ ತರಬೇತಿ, ಟೈಲರಿಂಗ್ ಮುಂತಾದ ಕಸುಬು ಮಾಡುವವರಿಗೆ ಈ ಯೋಜನೆಗಳು ಜೀವನವನ್ನು ಸುಧಾರಿಸುವಲ್ಲಿ ಹೆಚ್ಚು ಸಹಾಯವಾಗಲಿದೆಯೆಂದರು.

ಕಾರ್ಯಕ್ರಮವನ್ನು  ಡಾ. ಈ. ಈರದಾಸಪ್ಪ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಭ್ರಮೆ ಮತ್ತು ವಾಸ್ತವ

ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…

17 mins ago

ಮುಂದಿನ ವರ್ಷದಿಂದ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…

32 mins ago

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |

ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…

11 hours ago

ರೈತ ಉಪಯೋಗಿ ಬಗೆ ಬಗೆಯ ಸರಕು ಸಾಗಣೆ ಗಾಡಿಗಳು

ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…

20 hours ago

ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು

ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ  ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …

20 hours ago

ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ

ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…

21 hours ago