ಗೋಕರ್ಣ: ಕೊರೋನಾ ಮುಕ್ತಿಗೆ ಪ್ರಾರ್ಥಿಸಿ ಗಂಗಾಧಾರಾ ಅಭಿಷೇಕ

March 21, 2020
8:54 PM

ಗೋಕರ್ಣ: ದೇಶಕ್ಕೆ ಎದುರಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕದಿಂದ ಮುಕ್ತಿ ನೀಡುವಂತೆ ಪ್ರಾರ್ಥಿಸಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ನೀಡಿದ ಮಾರ್ಗದರ್ಶನದಂತೆ ಗೋಕರ್ಣ ಮಹಾಬಲೇಶ್ವರನಿಗೆ ನಿರಂತರ ಗಂಗಾಜಲ ಧಾರಾ ಅಭಿಷೇಕ ಸಮರ್ಪಿಸಲಾಗುತ್ತಿದೆ.

ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಗೋಕರ್ಣಕ್ಕೆ ಪ್ರವೇಶ ತಡೆಹಿಡಿದ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಬಾರದು. ಶ್ರೀಕ್ಷೇತ್ರದಲ್ಲಿ ನೀಡುತ್ತಿರುವ ಅಮೃತಾನ್ನ ಭೋಜನವನ್ನೂ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಭಟ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ದೇಶದ ಹಿತದೃಷ್ಟಿಯಿಂದ ಭಕ್ತಾದಿಗಳು, ಮಾರಕ ವೈರಸ್ ಪ್ರಭಾವದಿಂದ ಭಾರತ ಮುಕ್ತವಾಗುವವರೆಗೂ ಗೋಕರ್ಣ ದರ್ಶನವನ್ನು  ದೂಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಯಥಾಪ್ರಕಾರ ನಿತ್ಯದ ಮಹಾಪೂಜೆ, ಪರ್ವಕಾಲದ ಉತ್ಸವ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror