ಗೋಕರ್ಣ: ದೇಶಕ್ಕೆ ಎದುರಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕದಿಂದ ಮುಕ್ತಿ ನೀಡುವಂತೆ ಪ್ರಾರ್ಥಿಸಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ನೀಡಿದ ಮಾರ್ಗದರ್ಶನದಂತೆ ಗೋಕರ್ಣ ಮಹಾಬಲೇಶ್ವರನಿಗೆ ನಿರಂತರ ಗಂಗಾಜಲ ಧಾರಾ ಅಭಿಷೇಕ ಸಮರ್ಪಿಸಲಾಗುತ್ತಿದೆ.
ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಗೋಕರ್ಣಕ್ಕೆ ಪ್ರವೇಶ ತಡೆಹಿಡಿದ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಬಾರದು. ಶ್ರೀಕ್ಷೇತ್ರದಲ್ಲಿ ನೀಡುತ್ತಿರುವ ಅಮೃತಾನ್ನ ಭೋಜನವನ್ನೂ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಭಟ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ದೇಶದ ಹಿತದೃಷ್ಟಿಯಿಂದ ಭಕ್ತಾದಿಗಳು, ಮಾರಕ ವೈರಸ್ ಪ್ರಭಾವದಿಂದ ಭಾರತ ಮುಕ್ತವಾಗುವವರೆಗೂ ಗೋಕರ್ಣ ದರ್ಶನವನ್ನು ದೂಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಯಥಾಪ್ರಕಾರ ನಿತ್ಯದ ಮಹಾಪೂಜೆ, ಪರ್ವಕಾಲದ ಉತ್ಸವ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…