ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್ ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.
ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…