ಗ್ರಾಮಗಳಿಗೆ ತೆರಳಿ ವಾಸ್ತವ್ಯ ಮಾಡಿ ಪ್ಲೀಸ್ : ಅಧಿಕಾರಿಗಳಿಗೆ ಕಾಂಗ್ರೆಸ್ ಮನವಿ

June 21, 2019
3:30 PM

ಸುಳ್ಯ: ಗ್ರಾಮಗಳಲ್ಲಿ ಜನರು ನೂರಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಧಿಕಾರಿಗಳು ಗ್ರಾಮಗಳಿಗೆ ತೆರಳಿ, ಸಾಧ್ಯವಾದರೆ ಗ್ರಾಮಗಳಲ್ಲಿ ಒಂದು ದಿನ ವಾಸ್ತವ್ಯ ಮಾಡಿ.‌ ಜನರ ಜ್ವಲಂತ ಸಮಸ್ಯೆಗಳನ್ನು ಅರಿತು ಅದರ ಪರಿಹಾರಕ್ಕೆ ಪ್ರಯತ್ನಿಸಿ. ಹೀಗೊಂದು ಮನವಿಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ತಹಶೀಲ್ದಾರ್ ರಿಗೆ ಸಲ್ಲಿಸಲಾಗಿದೆ.

Advertisement

ಸುಳ್ಯ ತಾಲೂಕಿನ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಪ್ರತಿ ಗ್ರಾಮ ಗ್ರಾಮಗಳಿಗೆ ತೆರಳಿ ವಾಸ್ತವ್ಯ ಮಾಡಿ ಅಲ್ಲಿನ ಜನರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು ಇಲಾಖೆಗಳ ವಿವಿಧ ಸೌಲಭ್ಯದ ಬಗ್ಗೆ ಜನರಿಗೆ ತಿಳಿಸಬೇಕು. ತಹಸೀಲ್ದಾರ್ ನೇತೃತ್ವದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಹೊಸ ಒಂದು ಪ್ರಯತ್ನ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಅವರಿಗೆ ನೀಡಿದ ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಎಂ. ವೆಂಕಪ್ಪ ಗೌಡ , ಧೀರಾ ಕ್ರಾಸ್ತಾ , ಮಾಜಿ ಸದಸ್ಯರಾದ ಕೆ.ಎಂ.ಮುಸ್ತಾಫಾ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ , ಆನಂದ ಕೆಂಬಾರೆ , ಇಬ್ರಾಹಿಂ ಶಿಲ್ಪಾ , ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group